Sunday, September 15, 2024
Homeರಾಷ್ಟ್ರೀಯ | Nationalದೇವಾಲಯದರಲ್ಲಿ ಗೋವಿನ ಬಾಲ ಪತ್ತೆ, ಜೈಪುರ ಉದ್ವಿಗ್ನ

ದೇವಾಲಯದರಲ್ಲಿ ಗೋವಿನ ಬಾಲ ಪತ್ತೆ, ಜೈಪುರ ಉದ್ವಿಗ್ನ

Rajasthan’s Bhilwara on edge after ‘cow tail is found on temple premises’

ಜೈಪುರ,ಆ.27- ದೇವಸ್ಥಾನದ ಆವರಣವೊಂದರಲ್ಲಿ ಗೋವಿನ ಬಾಲ ಪತ್ತೆಯಾಗಿರುವ ಘಟನೆ ರಾಜಸ್ಥಾನದಲ್ಲಿ ಅಲ್ಲೊಲ್ಲ ಕಲ್ಲೊಲ ಸೃಷ್ಟಿಸಿದೆ.ಈ ಘಟನೆ ವಿರೋಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಪ್ರದೇಶದಲ್ಲಿ ಜಮಾಯಿಸಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

ಘಟನೆ ನಡೆದ ಸ್ಥಳದಲ್ಲಿ ಜನಸಾಗರವೇ ಜಮಾಯಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಶೀಘ್ರ ಆರೋಪಿಗಳನ್ನು ಬಂಧಿಸದಿದ್ದರೆ ಮಾರುಕಟ್ಟೆಗಳನ್ನು ಮುಚ್ಚಲಾಗುವುದು ಎಂದು ಬಲಪಂಥೀಯ ಗುಂಪುಗಳು ಪೊಲೀಸರಿಗೆ ಅಂತಿಮ ಗಡುವು ನೀಡಿದ್ದವು.

ಘಟನೆಯ ಹಿಂದಿರುವವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದರು. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ವಾತಾವರಣ ಶಾಂತಿಯುತವಾಗಿದೆ. ಸ್ಥಳೀಯ ಸಂಸದ ದಾಮೋದರ್‌ ಅಗರ್‌ವಾಲ್‌ ಅವರೊಂದಿಗೆ ಹಲವರು ಘಟನಾ ಸ್ಥಳಕ್ಕೆ ಆಗಮಿಸಿ, ತಪ್ಪಿತಸ್ಥರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಧರಣಿ ನಡೆಸಿದರು.

ನಾವು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸಿದೆವು, ಆದರೆ ಯುವಕರಲ್ಲಿ ತುಂಬಾ ಕೋಪವಿತ್ತು, ಅವರು ಕಲ್ಲು ತೂರಾಟವನ್ನು ಪ್ರಾರಂಭಿಸಿದರು. ನಗರದಲ್ಲಿ ಸಮಸ್ಯೆ ಸಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಲ್ಲು ತೂರಾಟ ನಡೆಸಿದ ಜನರ ವಾಹನಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾವು ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಮತ್ತು ಮಾರುಕಟ್ಟೆಯನ್ನು ಮುಚ್ಚಲು ಬಿಡುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾ ವ್ಯಾಜಿಸ್ಟ್ರೇಟ್‌ ವಂದನಾ ಖೋರ್ವಾಲ್‌ ತಿಳಿಸಿದ್ದಾರೆ.ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದ್ದು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

RELATED ARTICLES

Latest News