ಉಗ್ರರ ದಾಳಿಯಲ್ಲಿ ಐವರು ಯೋಧರು ಹುತಾತ್ಮ, ಕಂಬನಿ ಮಿಡಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

ನವದೆಹಲಿ,ಜು.9- ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿಗಳ ಸಾವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತೀವ್ರ ಕಂಬನಿ ಮಿಡಿದಿದ್ದಾರೆ. ಕಥುವಾ (ಜೆಕೆ)ಯ ಬದ್ನೋಟಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ನಮ ಐವರು ವೀರ ಭಾರತೀಯ ಸೇನೆಯ ಯೋಧರನ್ನು ಕಳೆದುಕೊಂಡಿದ್ದಕ್ಕಾಗಿ ನಾನು ತೀವ್ರ ದುಃಖಿತನಾಗಿದ್ದೇನೆ ಎಂದು ರಕ್ಷಣಾ ಸಚಿವರು ಎಕ್ಸ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ನನ್ನ ಸಂತಾಪಗಳು, ಈ ಕಷ್ಟದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ದೃಢವಾಗಿ … Continue reading ಉಗ್ರರ ದಾಳಿಯಲ್ಲಿ ಐವರು ಯೋಧರು ಹುತಾತ್ಮ, ಕಂಬನಿ ಮಿಡಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌