Wednesday, December 6, 2023
Homeರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ ಸಾಧ್ಯತೆ

ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ ಸಾಧ್ಯತೆ

ಬೆಂಗಳೂರು,ನ.9- ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ನೇಮಕಗೊಳ್ಳುವ ಸಾಧ್ಯತೆ ಇದೆ. ಕಳೆದ ವರ್ಷ ಮೇ 31ರಿಂದಲೂ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ ವಂದಿತಾ ಶರ್ಮ ಅವರು ಈ ತಿಂಗಳ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.

ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಹರಿಯಾಣ ಮೂಲದ ರಜನೀಶ್ ಗೋಯಲ್ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ವರ್ಷದ ಜುಲೈವರೆಗೂ ಸೇವಾವ ಹೊಂದಿರುವ ರಜನೀಶ್ ಗೋಯಲ್ ಪ್ರಸ್ತುತ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.

ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ

ಸಾರ್ವಜನಿಕ ಆಡಳಿತದಲ್ಲಿ ಡಾಕ್ಟರೇಟ್ ಪಡೆದಿರುವ ಅವರು 1986ರ ಆ.25ರಂದು ಐಎಎಸ್ ಸೇವೆಗೆ ಸೇರ್ಪಡೆಯಾದರು. ಇವರ ಪತ್ನಿ ಶಾಲಿನಿ ರಜನೀಶ್ ಕೂಡ ಪ್ರಸ್ತುತ ಐಎಎಸ್ ಅಧಿಕಾರಿಯಾಗಿದ್ದಾರೆ.
ಮುಂದಿನ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿಗಳಾದ ವಿ.ಮಂಜುಳ, ಅಜಯ್ ಸೇಠ್, ಡಾ.ಇ.ವಿ.ರಮಣರೆಡ್ಡಿ, ಅನಿಲ್‍ಕುಮಾರ್ ಝಾ ಜೇಷ್ಠತಾ ಪಟ್ಟಿಯಲ್ಲಿದ್ದಾರೆ. ಆದರೆ ಸರ್ಕಾರ ರಜನೀಶ್ ಗೋಯಲ್ ಅವರ ಕುರಿತು ಒಲವು ಹೊಂದಿದೆ ಎಂದು ಹೇಳಲಾಗಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ಸಂಬಂಧಪಟ್ಟಂತೆ ನಿರ್ಧಾರ ಕೈಗೊಳ್ಳಲಿರುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ನೀಡುವ ಸಾಧ್ಯತೆಗಳಿರುವುದಾಗಿ ಮೂಲಗಳು ತಿಳಿಸಿವೆ.

RELATED ARTICLES

Latest News