ರಾಜಸ್ಥಾನದಲ್ಲಿ ಕುತೂಹಲ ಕೆರಳಿಸಿರುವ ರಾಜ್ಯಸಭೆ ಚುನಾವಣೆ

Spread the love

ಜೈಪುರ, ಜೂ.10- ರಾಜಸ್ಥಾನದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಡೆದ ಮತದಾನದಲ್ಲಿ ಕಾಂಗ್ರೆಸ್‍ನ ರಣದೀಪ್ ಸುರ್ಜೆವಾಲಾ, ಮುಕುಲ್ ವಾಸ್ನಿಕ್ ಮತ್ತು ಪ್ರಮೋದ್ ತಿವಾರಿ ಭವಿಷ್ಯ ನಿರ್ಧಾರವಾಗಲಿದೆ. ತಲಾ ಅಭ್ಯರ್ಥಿಯ ಗೆಲುವಿಗೆ 41 ಮತಗಳ ಅಗತ್ಯವಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಚುನಾವಣೆ ಕುತೂಹಲ ಕೆರಳಿಸಿದೆ. ಹೆಚ್ಚುವರಿ ಅಭ್ಯರ್ಥಿಯ ಗೆಲುವಿನ ವೇಳೆಯ ರಾಜಕೀಯ ಬೆಳವಣಿಗೆಗಳು ಮುಂದಿನ ರಾಜಕೀಯ ದಿಕ್ಸೂಚಿಯಾಗಲಿವೆ ಎನ್ನಲಾಗಿದೆ.

ಮೂವರನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಅವರನ್ನು ಗೆಲ್ಲಿಸಿಕೊಳ್ಳಲು 123 ಶಾಸಕರಿಂದ ಮತ ಹಾಕಿಸಬೇಕಿತ್ತು. ತನ್ನ ಪಕ್ಷದ 108 ಶಾಸಕರು ಸೇರಿ ಒಟ್ಟು 126 ಶಾಸಕರ ಸಂಖ್ಯಾಬಲವಿದೆ ಎಂದು ಹೇಳಿಕೊಂಡಿತ್ತು. ಬಿಜೆಪಿ 71 ಶಾಸಕರನ್ನು ಹೊಂದಿದ್ದು ಒಂದು ಸ್ಥಾನವನ್ನು ನಿರಾಯಾಸವಾಗಿ ಪಡೆಯಬಹುದಾಗಿದೆ. ಹೆಚ್ಚುವರಿಯಾಗಿ 30 ಉಳಿಯಲಿವೆ. ಆರ್‍ಎಲ್‍ಪಿಯ ಮೂರು ಸೇರಿ ಒಟ್ಟು 33 ಸಂಖ್ಯಾಬಲವನ್ನು ಬಿಜೆಪಿ ಕ್ರೋಢಿಕರಿಸಿದೆ. ಹೆಚ್ಚುವರಿ ಅಭ್ಯರ್ಥಿಗಳ ಗೆಲುವಿಗೆ ಎಂಟು ಶಾಸಕರ ಕೊರತೆಯಿದೆ.

ಕಾಂಗ್ರೆಸ್ 108 ಶಾಸಕರ ಮೂಲಕ ಎರಡು ಸ್ಥಾನಗಳನ್ನು ಗೆದ್ದ ನಂತರ ಹೆಚ್ಚುವರಿ 26 ಮತಗಳನ್ನು ಹೊಂದಿದೆ. ಮೂರನೇ ಸ್ಥಾನ ಗೆಲ್ಲಲು 15 ಮತಗಳ ಅಗತ್ಯವಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯಸಭೆಯ ನಾಲ್ಕು ಸ್ಥಾನಗಳ ಪೈಕಿ ಕಾಂಗ್ರೆಸ್ ಮೂರರಲ್ಲಿ ಸುಲಭವಾಗಿ ಗೆಲ್ಲಲಿದೆ ಎಂದು ಹೇಳಿದ್ದಾರೆ.

ಬಿಜೆಪಿ ಬಹುಮತ ಇಲ್ಲದಿದ್ದರೂ ಸುಭಾಷ್ ಚಂದ್ರ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದಕ್ಕೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಆದರೆ ಬಿಜೆಪಿ ತನ್ನ ಅಕೃತ ಅಭ್ಯರ್ಥಿ ಘನಶ್ಯಾಮ್ ತಿವಾರಿ ಮತ್ತು ಸ್ವತಂತ್ರ ಅಭ್ಯರ್ಥಿ ಚಂದ್ರ ಇಬ್ಬರೂ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದೆ.

Facebook Comments