Sunday, November 3, 2024
Homeರಾಜ್ಯರಾಜ್ಯಸಭೆ ಚುನಾವಣೆ : ಕೈ ಶಾಸಕರು ರೆಸಾರ್ಟ್‍ಗೆ

ರಾಜ್ಯಸಭೆ ಚುನಾವಣೆ : ಕೈ ಶಾಸಕರು ರೆಸಾರ್ಟ್‍ಗೆ

ಬೆಂಗಳೂರು,ಫೆ.21- ರಾಜ್ಯಸಭಾ ಚುನಾವಣಾ ಕಣ ರಂಗೇರಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ತನ್ನ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ರಣತಂತ್ರ ರೂಪಿಸಿದ್ದು ತಮ್ಮ ಪಕ್ಷದ ಶಾಸಕರನ್ನು ರೆಸಾರ್ಟ್‍ಗೆ ನಿಯೋಜನೆ ಮಾಡಲು ಸಿದ್ಧತೆ ನಡೆಸಿದೆ. ಫೆ.27 ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಅಡ್ಡ ಮತದಾನ ತಡೆಗಟ್ಟುವ ನಿಟ್ಟಿ ನಲ್ಲಿ ಹಿಂದಿನ ದಿನ ಕಾಂಗ್ರೆಸ್ ಖಾಸಗಿ ರೆಸಾರ್ಟ್‍ನಲ್ಲಿ ಶಾಸಕರಿಗೆ ಸಭೆ ಆಯೋಜಿಸಿದೆ. ಅಲ್ಲಿ ವ್ಹಿಪ್ ಜಾರಿಗೊಳಿಸುವ ಸಾಧ್ಯತೆ ಇದೆ.

ಜೆಡಿಎಸ್ ಪಕ್ಷ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕಿಳಿಸಿರುವುದರಿಂದ ರಾಜ್ಯಸಭಾ ಚುನಾವಣೆ ಅಖಾಡ ತೀವ್ರ ಕುತೂಹಲ ಕೆರಳಿಸಿದ್ದು, ಅಡ್ಡ ಮತದಾನದ ಭೀತಿ ಎದುರಾಗಿದೆ. ಅಡ್ಡ ಮತದಾನವಾಗಿ ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗೆ ಸೋಲಾದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಆತಂಕ ಎದುರಾಗಿದೆ. ಹೀಗಾಗಿ ಎಲ್ಲಾ ಶಾಸಕರನ್ನು ಒಗ್ಗಟ್ಟಿನಲ್ಲಿಡಲು ರೆಸಾರ್ಟ್ ಸಭೆ ನಡೆಸಲು ಮುಂದಾಗಿದ್ದು, ಅಧಿವೇಶನ ಮುಗಿಯುತ್ತಿದ್ದಂತೆ ಎಲ್ಲಾ ಶಾಸಕರೂ ರೆಸಾರ್ಟ್‍ಗೆ ತೆರಳಲಿದ್ದಾರೆ. ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಜಯ್ ಮಕೇನ್ ಇಂದು ವಿಧಾನಸಭೆಯ ಮೊಗಸಾಲೆಗೆ ಬಂದು ತಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ ಮತ ಯಾಚನೆ ಮಾಡಿದರು.

ಕಾಂಗ್ರೆಸ್‍ನಿಂದ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಅವರೂ ಕೂಡ ಮತ ಯಾಚಿಸುತ್ತಿದ್ದಾರೆ. ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ನಾಲ್ವರು ಅಭ್ಯರ್ಥಿಗಳಿದ್ದಿದ್ದರೆ ಅವಿರೋಧ ಆಯ್ಕೆ ನಡೆಯುತ್ತಿತ್ತು. ಆದರೆ ಐವರು ಅಭ್ಯರ್ಥಿಗಳಿರುವುದರಿಂದ ಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರೂ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೈತ್ರಿ ಮಾಡಿಕೊಂಡಿರುವ ಜೆಡಿಎಸ್-ಬಿಜೆಪಿ ತಮ್ಮ ಅಭ್ಯರ್ಥಿಗಳ ಗೆಲುವಿಗೆ ರಣತಂತ್ರ ರೂಪಿಸಿದ್ದು, ತಮ್ಮ ಶಾಸಕರ ಮತಗಳು ಚದುರದಂತೆ ಎಚ್ಚರಿಕೆ ವಹಿಸಿವೆ.

ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ

ಈ ನಡುವೆ ಕೆಲ ಶಾಸಕರು ಅನುದಾನ ಹಂಚಿಕೆ ವಿಷಯದಲ್ಲಿ ಅಸಮಾಧಾನಗೊಂಡಿದ್ದು, ಅವರನ್ನು ಗುರುತಿಸಿ ಯಾವುದೇ ಕಾರಣಕ್ಕೂ ಚುನಾವಣೆ ಸಂದರ್ಭದಲ್ಲಿ ಗೈರು ಹಾಜರಾಗದಂತೆ ಎಚ್ಚರಿಕೆ ವಹಿಸಲು ಕೆಲವು ಹಿರಿಯ ನಾಯಕರನ್ನು ಅವರ ಚಲನವಲನದ ಬಗ್ಗೆ ನಿಗಾ ಇಡಲು ವರಿಷ್ಠ ನಾಯಕರು ಸೂಚಿಸಿದ್ದಾರೆ.

“ನಾನೂ ಶೂದ್ರ-ನೀವೂ ಶೂದ್ರರು ಯಾಕ್ರೀ ಇದೆಲ್ಲಾ..”

ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಂಗ ಪ್ರವೇಶಿಸಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಶಾಸಕರ ಮತಗಳು ವ್ಯರ್ಥವಾಗಬಾರದೆಂದು ರಾಜ್ಯ ನಾಯಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಈಗಾಗಲೇ ಶಿಕ್ಷಕರ ಕ್ಷೇತ್ರವನ್ನು ಗೆದ್ದಿದ್ದು, ಈಗ ರಾಜ್ಯಸಭೆಯಲ್ಲೂ ಕೂಡ ನಮ್ಮ ಮೂವರು ಅಭ್ಯರ್ಥಿಗಳು ಗೆಲುವಿಗೆ ಏನೆಲ್ಲ ಕಾರ್ಯತಂತ್ರ ನಡೆಸಬೇಕೋ ಅದರ ಬಗ್ಗೆ ಮುತುವರ್ಜಿ ವಹಿಸುವಂತೆ ಸೂಚಿಸಿದ್ದಾರೆ. ಫೆ.27 ರಂದು ಮತದಾನ ನಡೆಯಲಿದ್ದು, ಪಕ್ಷೇತರರು ಯಾವ ಕಡೆ ವಾಲಲಿದ್ದಾರೆ, ಯಾವ ಪಕ್ಷದವರು ಅಡ್ಡ ಮತದಾನ ಮಾಡಲಿದ್ದಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

RELATED ARTICLES

Latest News