ನಾಳೆ 67 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Social Share

ಬೆಂಗಳೂರು,ಅ.31- ನಾಡಹಬ್ಬ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 67 ಮಂದಿಗೆ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನೀಲ್‍ಕುಮಾರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವವರು ಮುನ್ನೆಲೆಗೆ ಬಾರದೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿರುವ ಮಹಾನೀಯರಾಗಿದ್ದಾರೆ.

ವಿಶೇಷವಾಗಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಿಗೆ 5 ಲಕ್ಷ ರೂ. ನಗದು, 25 ಗ್ರಾಂ ತೂಕದ ಚಿನ್ನದ ಪದಕ, ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುತ್ತಿದೆ.

ಇಸ್ರೋದ ಮಾಜಿ ಅಧ್ಯಕ್ಷ ಕೆ.ಶಿವನ್, ವಿದ್ವಾಂಸ ಅ.ರಾ.ಮಿತ್ರ, ಹಿರಿಯ ನಟ ದತ್ತಣ್ಣ, ವಾಗ್ಮಿ ಪ್ರೊ.ಕೃಷ್ಣೇಗೌಡ ಸೇರಿದಂತೆ ಎಲ್ಲಾ ಕ್ಷೇತ್ರಗಳನ್ನೂ ಪರಿಗಣಿಸಿ ಎಲ್ಲಾ ಸ್ತರಗಳಲ್ಲಿರುವ ಸಾಧಕರನ್ನು ಹೆಕ್ಕಿ ಹಾರಿಸಲಾಗಿರುವುದು ವಿಶೇಷ.

Articles You Might Like

Share This Article