ಬೆಂಗಳೂರು,ಅ.31- ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಸಾಹಿತಿ ಪ್ರೊ.ಸಿ.ನಾಗಣ್ಣ, ಖ್ಯಾತ ವೈದ್ಯ ಡಾ.ಸಿ.ರಾಮಚಂದ್ರ, ಪತ್ರಕರ್ತರಾದ ದಿನೇಶ್ ಅಮೀನ್‍ಮಟ್ಟು, ಜವರಪ್ಪ ಹಾಗೂ 10 ಸಂಘ ಸಂಸ್ಥೆಗಳಿಗೆ ಈ ಬಾರಿಯ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ನಾಡು-ನುಡಿ,ಇತಿಹಾಸ, ಕ್ರೀಡೆ, ವಿಜ್ಞಾನ, ವೈದ್ಯಕೀಯ, ರಂಗಭೂಮಿ, ಯಕ್ಷಗಾನ, ಆಡಳಿತ, ಜಾನಪದ, ಸಾಹಿತ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತದೆ.
ಅದರಂತೆ ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳಿಸುತ್ತಿರುವ ಶುಭ ಸಂದರ್ಭದಲ್ಲಿ ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಇದೇ ಮೊದಲ ಬಾರಿಗೆ 10 ಸಂಘ ಸಂಸ್ಥೆಗಳಿಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.
ನಾಳೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರ ಗಣ್ಯರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಪ್ರಶಸ್ತಿಯು 5 ಲಕ್ಷ ನಗದು, 25 ಗ್ರಾಂ ಬಂಗಾರ ಪದಕ, ನಾಡದೇವಿ ಭುವನೇಶ್ವರಿ ಪ್ರತಿಮೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿ ಈ ಕೆಳಕಂಡಂತಿದೆ :