Saturday, September 23, 2023
Homeಇದೀಗ ಬಂದ ಸುದ್ದಿಕರ್ನಾಟಕ ಟೇಬಲ್ ಟೆನ್ನಿಸ್ ಸಂಸ್ಥೆ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಅವಿರೋಧ ಆಯ್ಕೆ

ಕರ್ನಾಟಕ ಟೇಬಲ್ ಟೆನ್ನಿಸ್ ಸಂಸ್ಥೆ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಅವಿರೋಧ ಆಯ್ಕೆ

- Advertisement -

ಬೆಂಗಳೂರು, ಸೆ.11- ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾರಾಮಯ್ಯ ಅವರು ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈವರೆಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಗೆ ಧಾರವಾಡದಲ್ಲಿಂದು ನಡೆದ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಅಧಿಕಾರದ ಅವಧಿ 6 ವರ್ಷಗಳ ವರೆಗೆ ಇರುತ್ತದೆ. ಪ್ರಹ್ಲಾದ್ ಜೋಶಿ ಅವರಿಗೂ ಮುನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

- Advertisement -

ರಾಜ್ಯದ ಜನ ಗ್ಯಾರಂಟಿಗಳ ಅಡ್ಡಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ : ಹೆಚ್‌ಡಿಕೆ

ಈ ಕುರಿತು ಸಂತಸ ವ್ಯಕ್ತಪಡಿಸಿರುವ ರಕ್ಷಾ ರಾಮಯ್ಯ, ಕ್ರೀಡೆ ಯುವ ಸಮೂಹದ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿದ್ದು, ಮಾನಸಿಕ ಮತ್ತು ದೈಹಿಕ ವಿಕಾಸಕ್ಕೆ ಪೂರಕವಾಗಿದೆ. ಟೇಬಲ್ ಟೆನ್ನಿಸ್ ಅತ್ಯಂತ ಪ್ರಮುಖ ಕ್ರೀಡೆಯಾಗಿದ್ದು, ಇದರಿಂದ ದೇಹದ ಎಲ್ಲಾ ಅಂಗಾಂಗಳಿಗೂ ವ್ಯಾಯಾಮ ದೊರೆಯುತ್ತದೆ. ಏಕಾಗ್ರತೆಯ ಪ್ರತೀಕವಾಗಿರುವ ಟೇಬಲ್ ಟೆನ್ನಿಸ್ ಕ್ರೀಡೆಯನ್ನು ರಾಜ್ಯದಲ್ಲಿ ಮತ್ತಷ್ಟು ಪ್ರಗತಿ ಪಥದತ್ತ ಕೊಂಡೊಯ್ಯಲು ಮತ್ತು ಪ್ರೋತ್ಸಾಹಿಸಲು ಶ್ರಮಿಸುವುದಾಗಿ ಹೇಳಿದರು.

#RakshaRamaiah, #unanimouslyelected, #President, #StateTableTennisAssociation,

- Advertisement -
RELATED ARTICLES
- Advertisment -

Most Popular