ಬೆಂಗಳೂರು,ಫೆ.20- ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೂಲಕ ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿಸಲು ರಾಜ್ಯ ಬಿಜೆಪಿ ಮುಂದಾಗಿದೆ.
ಹಳೆ ಮೈಸೂರು ಭಾಗದಲ್ಲಿ ಭರ್ಜರಿ ಮತ ಗಳಿಸಲು ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆಯನ್ನು ಬಜೆಟ್ ಮೂಲಕ ಮಾಡಿದೆ. ಇದನ್ನು ಇಷ್ಟಕ್ಕೆ ಸೀಮಿತಗೊಳಿಸದೇ, ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ಗುದ್ದಲಿ ಪೂಜೆಗೆ ಬಿಜೆಪಿ ಮುಂದಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಎಸ್.ಕೆ.ಭಗವಾನ್ ಇನ್ನಿಲ್ಲ
ಮಾರ್ಚ್ ಮೊದಲ ವಾರದಲ್ಲಿ ಹಿಂದೂತ್ವ ಫೈರ್ ಬ್ರ್ಯಾಂಡ್, ಯುಪಿ ಸಿಎಂ ಯೋಗಿ ಆದಿತ್ಯನಾಥರನ್ನು ಕರೆಯಿಸಿ ಅವರ ಮೂಲಕವೇ ರಾಮಮಂದಿರಕ್ಕೆ ಅಡಿಗಲ್ಲು ಹಾಕಿಸಲು ಕೇಸರಿ ಪಡೆ ರಣತಂತ್ರ ಹೆಣೆದಿದೆ.
ರಾಮ ಮಂದಿರ ವಿಚಾರ ಮುಂದಿನ ದಿನಗಳಲ್ಲಿ ರಾಮನಗರ ಹಾಗೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೆಳವಣಿಗೆಗೆ ಪೂರಕವಾಗಬಹುದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.
Ram Mandir, Ramanagara, yogi adityanath,