ಬೆಂಗಳೂರು,ಡಿ.14-ರಾಮನಗರ ಜಿಲ್ಲೆಯಲ್ಲಿರುವ ಪೌರಾಣಿಕ ಹಿನ್ನೆಲೆಯುಳ್ಳ ಶ್ರೀರಾಮದೇವರ ಬೆಟ್ಟವನ್ನು ಪವಿತ್ರ ಯಾತ್ರಾ ಸ್ಥಳ ಹಾಗೂ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಮದೇವರ ಬೆಟ್ಟದ ಮೇಲಿರುವ ಶ್ರೀರಾಮ ದೇವಾಲಯವನ್ನು ಜೀರ್ಣೋದ್ಧಾರ ಮಾಡುವುದರ ಜೊತೆಗೆ ರಾಮಜನ್ಮ ಭೂಮಿ ಅಯೋಧ್ಯೆ ಹಾಗೂ ಈ ಬೆಟ್ಟದ ನಡುವೆ ಅವಿನಾಭಾವ ಸಂಬಂಧ ಕಲ್ಪಿಸಲಾಗುತ್ತಿದೆ. ಆ ಮೂಲಕ ಅಗತ್ಯ ಮೂಲಸೌಲಭ್ಯ ಒದಗಿಸಿ ಪವಿತ್ರ ಯಾತ್ರಾ ಸ್ಥಳವಾಗಿ ರೂಪಿಸುವ ಉದ್ದೇಶ ಸರ್ಕಾರಕ್ಕಿದೆ.
ರಾಮನಗರದಿಂದ ಬೆಳ್ಳಿ ಇಟ್ಟಿಗೆ, ಸ್ಥಳೀಯ ರೇಷ್ಮೆ ಸೀರೆ ಮತ್ತು ಶಲ್ಯವನ್ನು ಕಾಣಿಕೆಯಾಗಿ ಅಯೋಧ್ಯೆ ರಾಮಮಂದಿರಕ್ಕೆ ನೀಡಲಾಗುತ್ತದೆ. ಅಯೋಧ್ಯೆಯಿಂದ ಪವಿತ್ರ ಮೃತ್ತಿಕೆಯನ್ನು ಶ್ರೀರಾಮ ದೇವಾಲಯಕ್ಕೆ ತರಲಾಗುತ್ತದೆ.
ಶೋಲೆ ಸಿನಿಮಾ ಚಿತ್ರೀಕರಣದಿಂದ ರಾಮಘಡ್ ಎಂಬ ಪ್ರಖ್ಯಾತಿಯನ್ನು ರಾಮದೇವರ ಬೆಟ್ಟ ಪಡೆದುಕೊಂಡಿದೆ. ಜೀರ್ಣೋದ್ಧಾರ ಮಾಡಿ ಸಮಗ್ರವಾಗಿ ಅಭಿವೃದ್ಧಿ ಪಡಿಸಿದರೆ ರಾಜ್ಯದ ಪ್ರಮುಖ ಪವಿತ್ರ ಯಾತ್ರಾ ಸ್ಥಳವಾಗಿ ಮಾರ್ಪಡಲಿದೆ ಎಂಬ ಯೋಜನೆ ರೂಪಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ಸೀರೆ ಶೌಚಾಲಯ..!
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ರಾಮನಗರ ಜಿಲ್ಲೆಯ 150 ಮಂದಿಯ ಭಕ್ತರ ತಂಡದೊಂದಿಗೆ ತೆರಳಿ ಒಂದು ಬೆಳ್ಳಿ ಇಟ್ಟಿಗೆ, ಸ್ಥಳೀಯ ರೇಷ್ಮೆ ಸೀರೆ ಮತ್ತು ಶಲ್ಯವನ್ನು ಕಾಣಿಕೆಯಾಗಿ ನೀಡುವುದಾಗಿ ರಾಮನಗರ ಜಿಲ್ಲೆ ಉಸ್ತುವಾರಿ ಸಚಿವ ಹಾಗೂ ಉನ್ನತ ಶಿಕ್ಷಣ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ರಾಮದೇವರ ಬೆಟ್ಟಕ್ಕೂ ಶ್ರೀರಾಮನ ಮೂಲತಾಣ ಅಯೋಧ್ಯೆ ನಡುವೆ ಪರಂಪರಾಗತ ಸಂಬಂಧವಿದೆ. ಅಲ್ಲಿಂದಲೂ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಿ ತಂದು, ಇಲ್ಲಿನ ರಾಮದೇವರ ಬೆಟ್ಟಕ್ಕೆ ಸಮರ್ಪಿಸಲಾಗುವುದು. ಜತೆಗೆ ರಾಮದೇವರ ಬೆಟ್ಟವನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಿ, ಆಕರ್ಷಕ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.
ರಾಮನಗರವು ರೇಷ್ಮೆಗೆ ಹೆಸರಾಗಿದ್ದು, ಸೀತಾದೇವಿಗೆ ಇಲ್ಲಿನ ರೇಷ್ಮೆ ಸೀರೆ, ರಾಮ ಲಕ್ಷ್ಮಣರಿಗೆ ಶಲ್ಯ ಕೊಡಲಾಗುವುದು. ರಾಮನಗರದ ರಾಮಭಕ್ತರ ದೇಣಿಗೆಯಿಂದ ಖರೀದಿಸಿರುವ ಬೆಳ್ಳಿ ಇಟ್ಟಿಗೆಗೆ ರಾಮನಗರದ ರಾಮದೇವರ ಬೆಟ್ಟ ಮತ್ತು ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿ„ಬದ್ಧವಾಗಿ ಪೂಜೆ ಸಲ್ಲಿಸಲಾಗಿ ತಿಳಿಸಿದ್ದಾರೆ.
ರಾಹುಲ್‍ಗೆ ಸಾಥ್ ನೀಡಿದ RBI ಮಾಜಿ ಗವರ್ನರ್ ರಘುರಾಮ್ ರಾಜನ್
ಶ್ರೀರಾಮ ನಮ್ಮ ಸನಾತನ ಸಂಸ್ಕøತಿ ಮತ್ತು ಮËಲ್ಯಗಳ ಮೂಲಪುರುಷರಾಗಿದ್ದು, ಸ್ಥಳೀಯರ ತಂಡದೊಂದಿಗೆ ತಾವೂ ತೆರಳುತ್ತಿದ್ದು, ನಾಳೆ ಅಯೋಧ್ಯೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಗುವುದು. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರು ಪ್ರಶಂಸಿಸಿದ್ದಾರೆ ಎಂದು ಹೇಳಿದ್ದಾರೆ.
Ramadevarabetta, Ramanagara, tourist, develop,