ಬೆಂಗಳೂರು, ಡಿ.20- ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಬಿಎಂಟಿಸಿ ಮತ್ತು ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದ ಎಲ್ಲ ಬಸ್‍ಗಳಲ್ಲೂ ಕೋವಿಡ್ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಬಸ್‍ಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಇಂದು ಕೇಂದ್ರ ಆರೋಗ್ಯ ಸಚಿವರೊಂದಿಗೆ ರಾಜ್ಯ ಆರೋಗ್ಯ ಸಚಿವರು ಸಭೆ ನಡೆಸಲಿದ್ದು, ಸಭೆಯಲ್ಲಿ ಸಲಹೆ ಪಡೆದು ನಂತರ ರಾಜ್ಯದಲ್ಲಿ ಮಾರ್ಗಸೂಚಿಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು.
ಪ್ರತಿಯೊಬ್ಬ ಪ್ರಯಾಣಿಕರೂ ಬಸ್‍ಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸಂಸತ್‍ನ ಭದ್ರತಾ ಲೋಪದ ವಾಸ್ತವಾಂಶವನ್ನು ಬಹಿರಂಗಕ್ಕೆ ಪ್ರಿಯಾಂಕ್ ಖರ್ಗೆ ಆಗ್ರಹ
ಕೇರಳದಿಂದ ಬರುವ ಹಾಗೂ ಹೋಗುವ ಬಸ್‍ಗಳಿಗೆ ಸ್ಯಾನಿಟೈಜರ್ ಸಿಂಪಡಿಸಲು ಸೂಚನೆ ನೀಡಲಾಗಿದೆ. ಇನ್ನು ಬಿಎಂಟಿಸಿ ಬಸ್‍ಗಳಲ್ಲಿ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರಿಗೆ ಅಧಿಕಾರಿಗಳು ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಪ್ರಯಾಣಿಕರು ಸಹ ಸಹಕರಿಸುವಂತೆ ತಿಳಿಸಿದರು.