ರಾಮನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 7 ಬಾಂಗ್ಲಾ ಪ್ರಜೆಗಳ ಬಂಧನ

Social Share

ರಾಮನಗರ, ಜು.13- ಸೂಕ್ತ ದಾಖಲೆಗಳಿಲ್ಲದೆ ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ 7 ಬಾಂಗ್ಲಾದೇಶದ ಪ್ರಜೆಗಳನ್ನು ರಾಮನಗರ ಜಿಲ್ಲೆಯ ಬಸವನಪುರದಲ್ಲಿ ಬಂಧಿಸಲಾಗಿದೆ.

ಬಂಧಿತರನ್ನು ಮೊಹಮ್ಮದ್ ಸೊಹಿಲ್ ರಾಣಾ(34), ಜುಲಿಕರ್ ಅಲಿ(34), ಉಜಲ್(30), ಮೊಹಮ್ಮದ್ ಮಿನ್ಹಾಜುಲ್ ಹುಸ್ಸೆನ್(25), ಮುಸ್ಸಾ ಶೇಖ್(27), ರಹೀಮ್(27) ಮತ್ತು ಆರಿಫುಲ್ ಇಸ್ಲಾಂ ಎಂದು ಗುರುತಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರಾಮನಗರ ಜಿಲ್ಲಾ ಪೊಲೀಸ್ ಅೀಧಿಕ್ಷಕ ಸಂತೋಷ್ ಬಾಬು, ಬಸವನಪುರ ಗ್ರಾಮದಲ್ಲಿರುವ ಲಿಂಕ್‍ಅಪ್ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಅಕ್ರಮವಾಗಿ ಬಂದು ಕೆಲಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ ಈ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

ದಾಳಿ ವೇಳೆ ಸೂಕ್ತ ದಾಖಲಾತಿಗಳನ್ನು ನೀಡದ ಹಿನ್ನೆಲೆಯಲ್ಲಿ ಇವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಲಾಗಿದೆ ಎಂದು ಅವರು ತಿಳಿಸಿದರು.

Articles You Might Like

Share This Article