ಕೆನಡಾದಲ್ಲಿ ಬಹುಭಾಷಾ ನಟಿ ರಂಭಾ ಕಾರು ಅಪಘಾತ

Social Share

ಟೊರಾಂಟೋ,ನ.1- ದೂರದ ಕೆನಡಾದಲ್ಲಿ ನೆಲೆಸಿರುವ ಕನ್ನಡ, ತಮಿಳು ಸೇರಿದಂತೆ ಬಹುಭಾಷಾ ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸಿ ತಮ್ಮದೆ ಆದ ಅಭಿಮಾನಿ ಬಳಗ ಹೊಂದಿರುವ ರಂಭಾ ಅವರ ಕಾರು ಅಪಘಾತವಾಗಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಿಂದಿ ಹೇರಿಕೆ ಕುರಿತು ಬೊಮ್ಮಾಯಿ-ರಿಜ್ವಾನ್ ನಡುವೆ ‘ಭಾಷಣ ಬಡಿದಾಟ’

ಆದರೆ, ಅಪಘಾತದಲ್ಲಿ ರಂಭಾ ಅವರ ಪುತ್ರಿ ಸಾಶಾ ಅವರಿಗೆ ತೀವ್ರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.ವಿವಾಹವಾದ ನಂತರ ಚಿತ್ರರಂಗದಿಂದ ದೂರ ಉಳಿದಿರುವ ರಂಭಾ ಅವರು, ಪತಿ ಇಂದ್ರಕುಮಾರ್ ಪದ್ಮನಾಥನ್ ಅವರೊಂದಿಗೆ ಟೊರಾಂಟೋದಲ್ಲಿ ವಾಸವಾಗಿದ್ದಾರೆ. ಅವರಿಗೆ ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

ಟೊರೊಂಟೊದಲ್ಲೇ ಅವರು ಮಕ್ಕಳಿಗೆ ಶಿಕ್ಷಣ ಕೂಡ ಕೊಡಿಸುತ್ತಿದ್ದಾರೆ. ಶಾಲೆ ಮುಗಿಸಿಕೊಂಡು ಮಕ್ಕಳನ್ನು ಕರೆತರುವಾಗ ಕಾರು ಅಪಘಾತಕ್ಕೀಡಾಗಿದೆ. ರಂಭಾ ಚಲಾಯಿಸುತ್ತಿದ್ದ ಕಾರು ಬಲ ಬದಿಯಿಂದ ಬಂದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ರಂಭಾ ಚಲಾಯಿಸುತ್ತಿದ್ದ ಕಾರಿನಲ್ಲಿ ಇಬ್ಬರು ಮಕ್ಕಳು ಮತ್ತು ಮಕ್ಕಳನ್ನು ನೋಡಿಕೊಳ್ಳುತ್ತಿರುವ ಕೆಲಸದಾಕೆ ಇದ್ದರು ಎಂದು ಹೇಳಲಾಗುತ್ತಿದ್ದು, ಕಿರಿಯ ಪುತ್ರಿ ಸಾಶಾಗೆ ತೀವ್ರ ಗಾಯಗಳಾಗಿದ್ದು, ಉಳಿದಂತೆ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಈ ಎಲ್ಲ ವಿವರಗಳನ್ನು ಸ್ವತಃ ರಂಭಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

AIOSEO Settings

Articles You Might Like

Share This Article