ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ ..?
ಬೆಂಗಳೂರು : ಅಶ್ಲೀಲ ಸಿಡಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಕಾನೂನಿನ ಸಂಕಷ್ಟ ಎದುರಾಗಿದೆ. ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್ ಜಾರಕಿಹೋಳಿಗೆ ಕಬ್ಬನ್ ಪಾರ್ಕ್ ಪೋಲೀಸರು ನೋಟೀಸ್ ನೀಡಿದ್ದಾರೆ. ಇದರಿಂದಾಗಿ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗ ಮೊದಲ ಬಾರಿಗೆ ಸಂಕಷ್ಟ ಸಿಲುಕಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ.’
ಇಂದು 10 ಗಂಟೆಗೆ ಆಡುಗೋಡಿಯ ಟೆಕ್ನಿಕಲ್ ಸೆಂಟರ್ ಗೆ ಆಗಮಿಸಿ ವಿಚಾರಣೆ ಎದುರಿಸುವಂತೆ ನೋಟೀಸ್ ನಲ್ಲಿ ಸೂಚಿಸಲಾಗಿದೆ. ಸಿಡಿ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಪೋಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿರುವ ಕಾರಣ ಪೋಲೀಸರು ನೋಟೀಸ್ ನೀಡಿದ್ದಾರೆ.
ಸಿಡಿ ಪ್ರಕರಣದ ಸೂತ್ರಧಾರ ಎನ್ನಲಾಗಿರುವ ನರೇಶ್ಗೌಡನ ಹೆಂಡತಿ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ವ್ಯಕ್ತಿ ಚೇತನ್ ಎಂಬಾತನಿಗೂ ಎಸ್ಐಟಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಇಂದು ಬೆಳಗ್ಗೆ 10ಕ್ಕೆ ಆಡುಗೋಡಿ ಟೆಕ್ನಿಕಲ್ ವಿಂಗ್ಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿದೆ. ಶನಿವಾರ ಯುವತಿಯ ಪೋಷಕರು ವಿಶೇಷ ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗಿ ಪ್ರಕರಣ ಕುರಿತಾಗಿ ಕೆಲವು ಮಹತ್ವದ ಮಾಹಿತಿಯನ್ನು ನೀಡಿದ್ದರು ಎನ್ನಲಾಗಿದೆ.
ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಪೋಷಕರು ಈ ಪ್ರಕರಣದಲ್ಲಿ ತಮ್ಮ ಪುತ್ರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತೆಯಾಳಾಗಿರಿಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಕೂಡ ಶಿವಕುಮಾರ್ ಮೇಲೆ ವಾಗ್ದಾಳಿ ನಡೆಸಿ ಈ ಪ್ರಕರಣ ಮಹಾನಾಯಕ ಅವರೇ ಎಂದು ಮೊದಲ ಬಾರಿಗೆ ದೊಡ್ಡ ಬಾಂಬ್ ಸಿಡಿಸಿದ್ದರು.
ಈ ಬೆಳವಣಿಗೆಗಳ ನಡುವೆಯೇ ರಮೇಶ್ ಜಾರಕಿಹೊಳಿಯನ್ನು ಬಂಧಿಸುವಂತೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಯುವತಿಯು ಅವರ ವಿರುದ್ಧ ಆತ್ಯಚಾರ ದೂರು ದಾಖಲಿಸಿದ್ದು,ಈಗಾಗಲೇ ಎಪ್ ಐ ಆರ್ ಕೂಡ ದಾಖಲಾಗಿದೆ. ಇನ್ನೊಂದೆಡೆ ಯುವತಿಯು ಸೋಮವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಒಂದು ಕಡೆ ರಮೇಶ್ ಜಾರಕಿಹೊಳಿ ಬಂಧನಕ್ಕೆ ಹೆಚ್ಚುತ್ತಿರುವ ಒತ್ತಡ, ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಟಕ್ಮರ್ ಕೊಡುತ್ತಿರುವುದು, ಯುವತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ಕೊಟ್ಟರೆ, ರಾಜ್ಯ ರಾಜಕಾರಣ ಮತ್ತೊಂದು ರೋಚಕ ಘಟ್ಟಕ್ಕೆ ತಲುಪುವುದರಲಿ ಅನುಮಾನವೇ ಇಲ್ಲ