ಸಾಹುಕಾರ್ ಗೆ ಠಕ್ಕರ್ ಕೊಡಲು ಡಿಕೆಶಿ ತಂತ್ರ..!

Spread the love

ಬೆಂಗಳೂರು,ಅ.19- ಬೆಳಗಾವಿ ರಾಜಕಾರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಿನ ವಿಧಾನಸಭೆ ಚುನಾವಣೆಗೆ ರಮೇಶ್ ಜಾರಕಿಹೊಳಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜೆಡಿಎಸ್ ಬುಟ್ಟಿಗೆ ಕೈ ಹಾಕಿದ್ದಾರೆ.

ಜೆಡಿಎಸ್‍ನಲ್ಲಿ ಗುರುತಿಸಿಕೊಂಡಿರುವ ಅಶೋಕ್ ಪೂಜಾರಿ ಕಳೆದ ವಿಧಾನಸಭೆಯ ಉಪಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ವಿರುದ್ದ ಬಂಡಾಯ ಅಭ್ಯರ್ಥಿಯಾಗಿ ಸ್ರ್ಪಧಿಸಿದ್ದರು.

ಈಗ ಅವರನ್ನು ಕಾಂಗ್ರೆಸ್‍ಗೆ ಕರೆತರುವ ತಯಾರಿಗಳು ನಡೆದಿವೆ. ಅಶೋಕ ಪೂಜಾರಿ ಅವರು ಈಗಾಗಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಶೀಘ್ರವೇ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

ಈ ಮೊದಲು ಬಿಜೆಪಿಯಲ್ಲಿದ್ದ ಅಶೋಕ್ ಪೂಜಾರಿ ಉಪಚುನಾವಣೆ ವೇಳೆ ಜೆಡಿಎಸ್ ಸೇರಿದ್ದರು. ಕಾಂಗ್ರೆಸ್ ರಮೇಶ್ ಜಾರಕಿಹೊಳಿ ವಿರುದ್ದ ಪ್ರಬಲ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಹೀಗಾಗಿ ಅಶೋಕ್ ಪೂಜಾರಿ ಅವರನ್ನು ಪಕ್ಷಕ್ಕೆ ಕರೆತಂದು ಕಣಕ್ಕಿಳಿಸುವ ತಯಾರಿ ನಡೆದಿದೆ.

Facebook Comments