ಆಪ್ತರೊಂದಿಗೆ ಸಾಹುಕಾರ್ ಸಭೆ, ಕುತೂಹಲ ಮೂಡಿಸಿದ ಮುಂದಿನ ನಡೆ..!

Spread the love

ಬೆಳಗಾವಿ, ಜು.2- ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತೆ ಸಚಿವ ಸ್ಥಾನ ಪಡೆಯಲು ದೆಹಲಿಗೆ ತೆರಳಿ ಬೆಂಗಳೂರಿಗೆ ಬಂದಿರುವ ಅವರು ಇಂದು ಗೋಕಾಕ ತಾಲೂಕಿನಲ್ಲಿ ತಮ್ಮ ಅಭಿಮಾನಿಗಳು ಹಾಗೂ ಸಹೋದರ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜತೆ ಮುಂದಿನ ನಿರ್ಣಯ ಬಗ್ಗೆ ಸಭೆ ನಡೆಸಲಿದ್ದಾರೆ.

ದೆಹಲಿಯಲ್ಲಿ ಹೈಕಮಾಂಡ್ ಭೇಟಿಗೆ ತೆರಳಿದ್ದ ಗೋಕಾಕ ಶಾಸಕ ರಮೇಶ ಜಾರಕಿಹೊಳಿಗೆ ಹೈಕಮಾಂಡ್ ನಾಯಕರು ಭೇಟಿಯಾಗದೆ ಇರುವುದರಿಂದ ಅಲ್ಲಿ ಅವರ ಗಾಡ್ ಫಾರ್ದ, ಮಹರಾಷ್ಟದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅವರಿಗೆ ತಮ್ಮ ವಿರುದ್ಧ ಷಡ್ಯಂತ್ರ ಮಾಡಿದ ಸ್ವಪಕ್ಷದವರ ವಿರುದ್ದ ದೂರು ನೀಡಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿದ್ದುಕೊಂಡು ತಂತ್ರ ರೂಪಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಮುಂದಿನ ರಾಜಕೀಯ ನಡೆಯ ಬಗ್ಗೆ ಸಹೋದರರಾದ ಲಖನ್ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಅವರ ಅಭಿಮಾನಿಗಳೊಂದಿಗೆ ಸಭೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿ ಕರೆಯುವ ಸಾಧ್ಯತೆ ಇದೆ.

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಮಹತ್ವದ ತಿರ್ಮಾನ ತೆಗೆದುಕೊಳ್ಳಲಿದ್ದಾರೆ. ಅಲ್ಲದೆ ನಿನ್ನೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ ನಡೆಸುವ ಸುಳಿವನ್ನು ನೀಡಿದ್ದಾರೆ.

Facebook Comments