ರಮೇಶ್ ಜಾರಕಿಹೊಳಿಗೆ ಶೀಘ್ರ ಸಚಿವ ಸ್ಥಾನ..

Social Share

ಬೆಳಗಾವಿ, ಡಿ. 29- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ವರಿಷ್ಠರು ಭರ ವಸೆ ನೀಡಿದ್ದಾರೆ ಎಂದು ಶಾಸಕ ಮಹೇಶ್ ಕುಮಟಹಳ್ಳಿ ತಿಳಿಸಿದರು.

ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲಿದ್ದೇನೆ. ಈಗಾಗಲೇ ಮಾಜಿಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹಾಲಿ ವಿಧಾನ ಪರಿಷತ್ ಸದಸ್ಯರಾಗಿದ್ದು, ನನಗೆ ಟಿಕೆಟ್ ಸಮಸ್ಯೆ ಉಂಟಾಗುವುದಿಲ್ಲ ಎಂದು ಹೇಳಿದರು.

ಕ್ಷೇತ್ರದಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ವರಿಷ್ಠರು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧ. ಪಕ್ಷದ ಬಗ್ಗೆ ನನಗೆ ಯಾವುದೇ ರೀತಿಯ ಅಸಮಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

68 ಸಾವಿರ ರೈತರ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸಂಪರ್ಕ

ರಮೇಶ್ ಜಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ವರಿಷ್ಠರು ಈಡೇರಿಸಲಿದ್ದಾರೆ. ಪಕ್ಷ ಹಾಗೂ ಕ್ಷೇತ್ರದ ವಿಚಾರದಲ್ಲಿ ನಾನು ಸೈಲೆಂಟಾಗಿಲ್ಲ. ನನ್ನ ಪಾಡಿ ನಾನು ಕೆಲಸ ಮಾಡಿಕೊಂಡು ಹೋಗುತ್ತಿರುವುದಾಗಿ ಹೇಳಿದರು.

ramesh jarkiholi, minister, mahesh kumathalli,

Articles You Might Like

Share This Article