ರಮೇಶ್ ಕುಮಾರ್ ವಿರುದ್ಧ ಬಳಸಿದ್ದ ಅಸಂಬದ್ಧ ಪದ ವಾಪಸ್ ಪಡೆದ ಹೆಚ್‌ಡಿಕೆ

Social Share

ಬೆಂಗಳೂರು, ನ.23- ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದ್ದು, ಆ ಮಾತನ್ನು ಹಿಂಪಡೆಯುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೇ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ.

ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು ಎರಡು-ಮೂರು ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು.

ತುಂಡು ತುಂಡಾಗಿ ಕತ್ತರಿಸುವುದಾಗಿ 2020ರಲ್ಲೇ ಬೆದರಿಕೆ ಹಾಕಿದ್ದ ಅಫ್ತಾಬ್‍

ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು ಯಾರಿಗೂ ಅಪಮಾನ ಮಾಡಲು ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.

ನೆಲಮಂಗಲದಲ್ಲಿ ಘರ್ಜಿಸಿದ ಪೊಲೀಸ್ ಪಿಸ್ತೂಲ್ : ದರೋಡೆಕೋರನಿಗೆ ಗುಂಡೇಟು

Ramesh Kumar, Srinivaspur, hd kumaraswamy,

Articles You Might Like

Share This Article