Wednesday, January 22, 2025
Homeಬೆಂಗಳೂರುರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್

ಬೆಂಗಳೂರು,ಏ.1- ನಗರದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಸಂಚುಕೋರನ ತಾಯಿಗೆ ಚಿಕ್ಕಮಗಳೂರಿನಲ್ಲಿ ಬಾಡಿಗೆಮನೆ ಮಾಡಲು ಸರ್ಕಲ್ ಇನ್ಸ್ಪೆಕ್ಟರ್ ಸಹಾಯ ಮಾಡಿದ್ದಾರೆಂಬ ಹಿನ್ನಲೆಯಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಇತ್ತೀಚೆಗೆ ಎನ್ಐಎ ಬಂಧಿಸಿರುವ ಆರೋಪಿ ಮುಜಾಮಿಲ್ ಶರೀಫ್ನನ್ನು ವಿಚಾರಣೆಗೊಳಪಡಿಸಿದಾಗ ಬಾಡಿಗೆಗೆ ಮನೆ ಮಾಡಲು ಸಿಪಿಐ ಸಹಾಯ ಮಾಡಿರುವ ಅಂಶ ಗೊತ್ತಾಗಿದೆ.

ಕಳಸಾ ಮೂಲದ ಆರೋಪಿ ಮುಜಾಮಿಲ್ ಶರೀಫ್ ತನ್ನ ತಾಯಿಯನ್ನು ಚಿಕ್ಕಮಗಳೂರಿಗೆ ಕರೆಸಿಕೊಂಡು ಬಾಡಿಗೆ ಮನೆ ಮಾಡಿ ಇರಿಸಿದ್ದ. ಬಾಡಿಗೆ ಮನೆ ಮಾಡಲು ಸರ್ಕಲ್ ಇನ್ಸ್ಪೆಕ್ಟರ್ ನೆರವು ನೀಡಿರುವ ಮಾಹಿತಿ ಲಭ್ಯವಾಗಿದೆ.

ಹಾಗಾಗಿ ಸಿಪಿಐ ಅವರು ಆರೋಪಿ ಮುಜಾಮಿಲ್ ಶರೀಫ್ ಜೊತೆ ಯಾವ ರೀತಿ ಸಂಪರ್ಕ ಇಟ್ಟುಕೊಂಡಿದ್ದರು ಎಂಬ ಮಾಹಿತಿಗಳನ್ನು ಎನ್ಐಎ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಶೀಘ್ರದಲ್ಲೇ ಅವರಿಗೆ ನೋಟಿಸ್ ನೀಡಿ ಕರೆಸಿಕೊಳ್ಳುವ ಸಾಧ್ಯತೆ ಇದೆ.


RELATED ARTICLES

Latest News