ಸುಪ್ರೀಂ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೋಯ್ ನೇಮಕ

Ranjan--01
ನವದೆಹಲಿ, ಸೆ.14-ಸುಪ್ರೀಂಕೋರ್ಟ್‍ನ ನೂತನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ. ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ನೂತನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕ ಮಾಡಿದ್ದಾರೆ.

ಅಕ್ಟೋಬರ್ 2ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಅವಧಿ ಪೂರ್ಣಗೊಳ್ಳಲ್ಲಿದ್ದು, ಅ.3ರಂದು ರಂಜನ್ ಗಗೋಯ್ ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆ ಮೂಲಕ ಈಶಾನ್ಯ ಭಾರತದಿಂದ ಸುಪ್ರೀಂಕೋರ್ಟ್‍ಗೆ ಮುಖ್ಯ ನ್ಯಾಯಮೂರ್ತಿ ಆಯ್ಕೆಯಾದ ಮೊದಲ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೂ ರಂಜನ್ ಗಗೋಯï ಪಾತ್ರರಾಗಿದ್ದಾರೆ.

ಎಂಟು ತಿಂಗಳ ಹಿಂದೆ ನ್ಯಾಯಮೂರ್ತಿಗಳಾದ ರಂಜನ್ ಗಗೋಯ್ ಮತ್ತು ಇತರೆ ನಾಲ್ಕು ಮಂದಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ಅವರ ಕಾರ್ಯವೈಖರಿಯನ್ನು ಟೀಕಿಸಿದ್ದರು.

Sri Raghav

Admin