Sunday, May 19, 2024
Homeಜಿಲ್ಲಾ ಸುದ್ದಿಗಳುಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ ಆತ್ಯಾಚಾರ ಆರೋಪಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ ಆತ್ಯಾಚಾರ ಆರೋಪಿಗೆ ಗುಂಡೇಟು

ಧಾರವಾಡ, ಮೇ 04- ಪೊಲೀಸರ ಮೇಲೆ ಎರಗಿದ ಆತ್ಯಾಚಾರ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿಯಲಾಗಿದೆ. ನವನಗರ ಪೊಲೀಸ್‌‍ ಠಾಣೆಯಲ್ಲಿ ನಡೆದಿದ್ದ ಬಾಲಕೀಯ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಸದ್ದಾಂ ಹುಸೇನ್‌ ಗುಂಡೇಟು ತಿಂದ ಕಾಮುಕ.

ಘಟನೆ ವಿವರ:ಆರೋಪಿ ಸದ್ದಾಂ ಹುಸೇನ್‌ ಹುಬ್ಬಳ್ಳಿಯ ಈಶ್ವರನಗರದ ನಿವಾಸಿಯಾಗಿದ್ದು ನೆರೆ ಮನೆಯ ಅಪ್ರಾಪ್ತ ಬಾಲಕಿ ಜತೆ ಸಲುಗೆ ಬೆಳೆಸಿ, ಪ್ರೀತಿಸುವುದಾಗಿ ಹೇಳಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ವಿಷಯ ತಿಳಿಸಿದರೆ ಜೀವಸಹಿತ ಬಿಡುವುದಿಲ್ಲ ಎಂದುಬೆದರಿಕೆ ಹಾಕಿದ್ದ ಕಳೆದ ಮೂರ್ನಾಲ್ಕು ದಿನದಿಂದ ಬಾಲಕಿ ವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪೋಷಕರು ಚಿಕಿತ್ಸೆಗಾಗಿ ಕಿಮ್ಸೌಗೆ ದಾಖಲಿಸಿದ್ದರೂ ಗುಣಮುಖವಾಗಲಿಲ್ಲ ನಂತರ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆ ವೇಳೆ ಬಾಲಕಿ ವಿಚಾರಿಸಿದಾಗ ಸದ್ದಾಂ ಹುಸೇನ್‌ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು ನವನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸದ್ದಾಂ ಹುಸೇನ್‌ ಪರಾರಿಯಾಗಿದ್ದ. ಪ್ರಕರಣವನ್ನು ಗಂಬೀರವಾಗಿ ಪರಿಗಣಿ ಕಾರ್ಯಾಚರಣೆ ಆರಂಭಿಸಿದಾಗ ಆತ ವಿದ್ಯಾಗಿರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಸೆರೆ ಹಿಡಿದಿದ್ದಾರೆ. ಆದರೂ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಓಡಿದ್ದಾನೆ ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದಾಗ ಇಂದು ಆರೋಪಿ ಕಾಲಿಗೆ ಹೊಕ್ಕಿ ಕುಸಿದು ಬಿದ್ದಿದ್ದಾನೆ.

ಆರೋಪಿ ಸದ್ದಾಂ ಹುಸೇನ್‌ ಹಲ್ಲೆಯಿಂದ ವಿದ್ಯಾಗಿರಿ ಪೊಲೀಸ್‌‍ ಠಾಣೆಯ ಇನ್ಸ್‌ಪೆಕ್ಟರ್‌ ಸಂಗಮೇಶ ಹಾಗೂ ಕಾನ್‌ಸ್ಟೆಬಲ್ ಅರುಣ್‌ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್‌ನನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.’

ಆರೋಪಿ ಸದ್ದಾಂ ಹುಸೇನ್‌ ವಿರುದ್ಧ ಐಪಿಸಿ 376, 506, ಜಾತಿ ನಿಂದನೆ ಮತ್ತು ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ಚಿಕಿತ್ಸೆಗಾಗಿ ಇಲ್ಲಿನ ಕಿಮ್ಸೌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಸಂಜೆ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News