Friday, October 4, 2024
Homeರಾಜ್ಯರೇಪ್ ಕೇಸ್ : ಶಾಸಕ ಮುನಿರತ್ನಗೆ 14 ದಿನದ ನ್ಯಾಯಾಂಗ ಬಂಧನ

ರೇಪ್ ಕೇಸ್ : ಶಾಸಕ ಮುನಿರತ್ನಗೆ 14 ದಿನದ ನ್ಯಾಯಾಂಗ ಬಂಧನ

Rape case: 14-day judicial custody for MLA Muniratna

ಬೆಂಗಳೂರು,ಸೆ.21- ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ 14 ದಿನದ ನ್ಯಾಯಾಂಗ ಬಂಧನಕ್ಕೊಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.

ಶುಕ್ರವಾರ ರಾಮನಗರ ಜಿಲ್ಲೆ ಕಗ್ಗಲಿಪುರ ಠಾಣೆ ಪೊಲೀಸರು ಸತತ 10 ಗಂಟೆ ಸುದೀರ್ಘ ವಿಚಾರಣೆಯ ನಂತರ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರು ಆರೋಪಿ ಮುನಿರತ್ನ ಅವರನ್ನು 14 ದಿನಗಳ ಕಾಲ ಅಂದರೆ ಅ.5ರವರೆಗೆ ನ್ಯಾಯಾಂಗ ಬಂಧಕ್ಕೆ ಒಪ್ಪಿಸಿ ಆದೇಶ ನೀಡಿದರು.

ಆರೋಪಿಯನ್ನು ಪೊಲೀಸರು ವಶಕ್ಕೆ ನೀಡಬೇಕೇ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದಾಗ ಈಗಾಗಲೇ ಪ್ರಕರಣ ಸಂಬಂಧ ಸ್ಥಳ ಮಹಜರು ವಿಚಾರಣೆ ನಡೆಸಲಾಗಿದೆ ಎಂದು ವಕೀಲರು ಹೇಳಿದರು.ಈ ಹಿನ್ನಲೆಯಲ್ಲಿ ಮುನಿರತ್ನಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ತಕ್ಷಣವೇ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಲಾಯಿತು.

ಮೂರು ದಿನಗಳ ಹಿಂದೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರನಿಗೆ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮುನಿರತ್ನಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಶುಕ್ರವಾರ ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗಡೆ ಬರುತ್ತಿದ್ದಂತೆ ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.

RELATED ARTICLES

Latest News