Saturday, June 22, 2024
Homeರಾಜ್ಯಅತ್ಯಾಚಾರ ಪ್ರಕರಣ : ಬಿಜೆಪಿ ಮುಖಂಡ ದೇವರಾಜೇಗೌಡಗೆ ನ್ಯಾಯಾಂಗ ಬಂಧನ

ಅತ್ಯಾಚಾರ ಪ್ರಕರಣ : ಬಿಜೆಪಿ ಮುಖಂಡ ದೇವರಾಜೇಗೌಡಗೆ ನ್ಯಾಯಾಂಗ ಬಂಧನ

ಬೆಂಗಳೂರು,ಮೇ17- ಮಹಿಳೆಯ ಮೇಲೆ ಅತ್ಯಾಚಾರ ಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಪಟ್ಟಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೂರು ದಿನಗಳಿಂದ ಪೊಲೀಸ್‌‍ ವಶದಲ್ಲಿದ್ದ ಅವರನ್ನು ಹಾಸನ ಪೊಲೀಸರು ಇಂದು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದೇವರಾಜೇಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು.

ಪ್ರಕರಣದ ಹಿನ್ನೆಲೆ:
ದೇವರಾಜೇಗೌಡ ವಿರುದ್ಧ ಏಪ್ರಿಲ್‌ 1ರಂದು ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಹಾಸನ ಜಿಲ್ಲೆಯ 36 ವರ್ಷದ ಮಹಿಳೆಯೊಬ್ಬರು ತಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ದೇವರಾಜೇಗೌಡ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವೀಡಿಯೋ ಕಾಲ್‌ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ವೀಡಿಯೋ ಕಾಲ್‌ ಮಾಡಿ ಪ್ರಚೋದನೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದರು.

ಪ್ರಜ್ವಲ್‌ ರೇವಣ್ಣ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡರು, ಹಾಸನದಿಂದ ಜೆಡಿಎಸ್‌‍ ಸಂಸದರಿಗೆ ಲೋಕಸಭೆ ಟಿಕೆಟ್‌ ನೀಡದಂತೆ ಆಗ್ರಹಿಸಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ, ಹೊಳೆನರಸೀಪುರ ಶಾಸಕ ಹೆಚ್‌.ಡಿ.ರೇವಣ್ಣ ವಿರುದ್ಧ ಸ್ಪರ್ಧಿಸಿದ್ದ ದೇವರಾಜೇಗೌಡ, ಲೈಂಗಿಕ ಕಿರುಕುಳದ ವೀಡಿಯೊಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ರಾಜ್ಯ ಕಾಂಗ್ರೆಸ್‌‍ ನಾಯಕರನ್ನು ದೂರಿದ್ದರು.ಇತ್ತೀಚೆಗೆ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲೂ ದೇವರಾಜೇಗೌಡ ಭಾರೀ ಸದ್ದು ಮಾಡಿದ್ದರು.

RELATED ARTICLES

Latest News