ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ವಿತರಣೆ

Social Share

ಬೆಂಗಳೂರು,ಫೆ.17- ಹೊಸದಾಗಿ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ವಿತರಿಸುವ ಕಾರ್ಯವನ್ನು ಮುಂದುವರೆಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‍ಕತ್ತಿ ವಿಧಾನಸಭೆಯಲ್ಲಿಂದು ಹೇಳಿದರು.
ಶಾಸಕ ಎಲ್.ನಾಗೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್ ಲಾಕ್‍ಡೌನ್ ಅವಯಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಸಲ್ಲಿಸಿರುವ ಅರ್ಜಿಗಳ ಸ್ಥಳ ಪರಿಶೀಲನೆ ಕಾರ್ಯವೂ ನಿಧಾನಗತಿಯಲ್ಲಿ ನಡೆದಿತ್ತು. ಅಲ್ಲದೆ, ಈ ಅವಧಿಯಲ್ಲಿ ಬಯೋಮೆಟ್ರಿಕ್ ಹಿಂಪಡೆದ ಕಾರಣ ಪಡಿತರ ಚೀಟಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಈಗ ಅರ್ಹರು ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬಹುದು. ಅದನ್ನು ಅಧಿಕಾರಿಗಳು ಪರಿಶೀಲಿಸಿ ವಿತರಣೆ ಮಾಡುತ್ತಿದ್ದಾರೆ. ಅರ್ಜಿಗಳ ಹಿರಿತನದ ಮೇಲೆ ಹೊಸ ಆದ್ಯಾತಾ ಪಡಿತರ ಚೀಟಿಗಳನ್ನು ನೀಡುತ್ತಿದ್ದೇವೆ ಎಂದರು.
ಮೈಸೂರು ಜಿಲ್ಲೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಫಲಾನುಭವಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಮಾರ್ಚ್ 31ರೊಳಗೆ ಪಡಿತರ ಚೀಟಿಯನ್ನು ಇವರಿಗೆ ನೀಡಲಾಗುವುದ ಎಂದು ಆಶ್ವಾಸನೆ ನೀಡಿದರು.

Articles You Might Like

Share This Article