ಮುಂಬೈ, ಡಿ. 13- ವಾಣಿಜ್ಯ ರಾಜಧಾನಿ ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕಚೇರಿಗೆ ಇಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ರಷ್ಯನ್ ಭಾಷೆಯಲ್ಲಿ ಬರೆದ ಇ-ಮೇಲ್ ನಲ್ಲಿ ಆರ್ ಬಿಐ ಆವರಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಮುಂಬೈ ಪೊಲೀಸರು ಮಾತಾ ರಮಾಬಾಯಿ ಮಾರ್ಗದ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸದ್ಯಕ್ಕೆ ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಅಧಿಕಾರಿಗಳು ಬೆದರಿಕೆಯ ಮೂಲವನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಆರ್‌ಬಿಐ ಕಟ್ಟಡದ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ಭರವಸೆ ನೀಡಿದ್ದಾರೆ. ಪೊಲೀಸರು ಸ್ಥಳದಲ್ಲಿ ಸಂಪೂರ್ಣ ಶೋಧ ನಡೆಸಿದ್ದು, ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ.
ಕಳೆದ ನವೆಂಬರ್ 17ರಂದು ಬಾಂಬ್ ಬೆದರಿಕೆ ಬಂದಿತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆ ಕರೆ ಬಂದಿತ್ತು. ಅಲ್ಲದೆ, ಕರೆ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ. ಭಾರತೀಯ ರಿಸರ್ವ್ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಕರೆ ಬಂದಿದೆ.
ಫೋನ್ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ರಿಸರ್ವ್ ಬ್ಯಾಂಕ್ ನ ಭದ್ರತಾ ಸಿಬ್ಬಂದಿ ನೀಡಿದ ದೂರಿನಂತೆ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.