Tuesday, November 4, 2025
Homeರಾಜ್ಯವಿಧಾನಸೌಧದಲ್ಲಿ ವಿಐಪಿಗಳಿಗಾಗಿ ಆರ್‌ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು : ನಿಖಿಲ್ ಆರೋಪ

ವಿಧಾನಸೌಧದಲ್ಲಿ ವಿಐಪಿಗಳಿಗಾಗಿ ಆರ್‌ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು : ನಿಖಿಲ್ ಆರೋಪ

RCB victory celebration was organized for VIPs in Vidhana Soudha: Nikhil

ಬೆಂಗಳೂರು, ಜೂ.10- ಆರ್‌ಸಿಬಿ ವಿಜಯೋತ್ಸವಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎರಡು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೆ ಹೊರತು ಜನಸಾಮಾನ್ಯರನ್ನಲ್ಲ. 11 ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದಾಗ, ಸಚಿವರ ಕುಟುಂಬದವರು ಸೆಲ್ಪಿ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದರು ಎಂದು ಆರೋಪಿಸಿದ್ದಾರೆ.

- Advertisement -

ಅದು ನಮ್ಮ ಕಾರ್ಯಕ್ರಮವಾಗಿರಲಿಲ್ಲ ಎಂಬುದು ಮುಖ್ಯಮಂತ್ರಿಗಳ ಪ್ರತಿಕ್ರಿಯೆಯಾಗಿದೆ. ಕ್ರೀಡಾಂಗಣವು ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿದೆ. ಅದು ಪಾಕಿಸ್ತಾನವಲ್ಲ. ಇದು ನಿಮ್ಮ ರಾಜ್ಯ, ನಿಮ್ಮ ನಗರ. ನಿಮ್ಮ ಜನರು. ನೀವು ರಾಜ್ಯವನ್ನು ಮುನ್ನಡೆಸಲು ಆಯ್ಕೆಯಾದವರು, ಕಾರ್ಯಕ್ರಮದಲ್ಲಿ ಅತಿಥಿಯಂತೆ ವರ್ತಿಸುವುದನ್ನು ಮೊದಲು ನಿಲ್ಲಿಸಿ.

ಫೋಟೋ-ಶೋ ಗಳಿಗಾಗಿ ನಿಮ್ಮನ್ನು ನೇಮಿಸಲಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ಜೀವಗಳನ್ನು ರಕ್ಷಿಸಲು ನಿಮ್ಮನ್ನು ಮುಖ್ಯಮಂತ್ರಿ ಮಾಡಲಾಗಿದೆ. ಆದರೆ ನೀವು ಮಾತ್ರ ಜನರ ಜೀವಗಳನ್ನು ರಕ್ಷಿಸಲು ವಿಫಲರಾಗಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

- Advertisement -
RELATED ARTICLES

Latest News