ಚಾಮರಾಜನಗರ ಜಿಲ್ಲೆಯ ಇಂಡಿಗನತ್ತ ಮತಗಟ್ಟೆಯಲ್ಲಿ ನಾಳೆ ಮರು ಮತದಾನ

ಬೆಂಗಳೂರು,ಏ.28-ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಮತಗಟ್ಟೆಯಲ್ಲಿ ನಾಳೆ ಮರು ಮತದಾನ ನಡೆಯಲಿದೆ. ಕಳೆದ ಶುಕ್ರವಾರ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ, ಮತಗಟ್ಟೆಯ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿ, ಕಲ್ಲು ತೂರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ಮತಯಂತ್ರಗಳೂ ಕೂಡ ಹಾನಿಗೊಳಗಾಗಿದ್ದವು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾಧಿ ಕಾರಿ ಸಿ.ಟಿ.ಶಿಲ್ಪಾನಾಗ್‌ ಅವರು ಈ ಸಂಬಂಧ ಭಾರತದ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದರು.ವರದಿಯನ್ನು ಪರಿಶೀಲಿಸಿದ ಆಯೋಗವು ಮರು ಮತದಾನ ನಡೆಸಲು ತೀರ್ಮಾನಿಸಿದೆ. ಹೀಗಾಗಿ ನಾಳೆ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ … Continue reading ಚಾಮರಾಜನಗರ ಜಿಲ್ಲೆಯ ಇಂಡಿಗನತ್ತ ಮತಗಟ್ಟೆಯಲ್ಲಿ ನಾಳೆ ಮರು ಮತದಾನ