ಮಿತಿ ಮೀರಿದ ರಿಯಲ್ ಎಸ್ಟೇಟ್ ದಂಧೆ : ಶಾಲೆ-ಕಾಲೇಜುಗಳಿಗೆ ಜಾಗದ ಕೊರತೆ

Social Share

ಬೆಂಗಳೂರು, ನ.24- ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಮಾಫಿಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪರಿಣಾಮ ಭವಿಷ್ಯದಲ್ಲ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಮತ್ತು ಸರ್ಕಾರಿ ಕಚೇರಿಗಳನ್ನು ಕಟ್ಟಲು ಭೂಮಿ ಸಿಗುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

ಮುಂದಿನ 10-12 ವರ್ಷಗಳಲ್ಲಿ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಮತ್ತು ಇತರ ಮೂಲಸೌಕರ್ಯಗಳನ್ನು
ನಿರ್ಮಿಸಲು ಭೂಮಿ ಲಭ್ಯವಾಗುವುದು ಕಷ್ಟಕರವಾಗಲಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವ ಕಾರ್ಯಕ್ರಮದಲ್ಲಿ ಸಚಿವರು ಹಳ್ಳಿಯೊಂದರಲ್ಲಿ ಉಳಿದು ನಿವಾಸಿಗಳ ಕಷ್ಟಗಳನ್ನು ಆಲಿಸುತ್ತಿದ್ದಾರೆ. ಈ ವೇಳೆ ಸಚಿವರಿಗೆ ಶಾಲೆ, ಕಾಲೇಜುಗಳು, ಅಂಗನವಾಡಿಗಳು, ಸ್ಮಶಾನಗಳು, ಆಟದ ಮೈದಾನಗಳು, ಆರೋಗ್ಯ ಕೇಂದ್ರಗಳು ಮತ್ತು ಹಲವಾರು ಸೌಲಭ್ಯಗಳಿಗೆ ಭೂಮಿಯ ಕೊರತೆಯಿದೆ ಕಂಡುಬಂದಿದೆ.

ಬಾಲಿವುಡ್ ಹಿರಿಯ ನಟ ವಿಕ್ರಂ ಗೋಖಲೆ ನಿಧನ

ರಾಜ್ಯದಲ್ಲಿ ಮೂಲಸೌಕರ್ಯ ನಿರ್ಮಾಣಕ್ಕೆ ಭೂಮಿಯನ್ನು ಹುಡುಕಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭವಿಷ್ಯದಲ್ಲಿ ಇದು ಮತ್ತಷ್ಟು ಅಪಾಯದ ಮಟ್ಟಕ್ಕೆ ತಲುಪುವ ಸಾಧ್ಯತೆಗಳು ಹೆಚ್ಚಾಗಿದೆ. ಹೀಗಾಗಿಯೇ ಅಗತ್ಯ ಮೂಲಸೌಕರ್ಯಗಳನ್ನು ನಿರ್ಮಿಸಲು ಸರ್ಕಾರಿ ಭೂಮಿಯನ್ನು ಗುರುತಿಸುವಂತೆ ಈ ಹಿಂದೆಯೇ ಎಲ್ಲಾ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಭೂಮಿಯ ಬೆಲೆ ಹೆಚ್ಚುತ್ತಿದೆ ಮತ್ತು ಸರ್ಕಾರವು ಅಂತಹ ಹೆಚ್ಚಿನ ಬೆಲೆಗೆ ಆಸ್ತಿಗಳನ್ನು ಖರೀದಿಸಲು ಸಾಧ್ಯವಿಲ್ಲ. ಭವಿಷ್ಯಕ್ಕಾಗಿ ಭೂಮಿ ಉಳಿಸಿಕೊಳ್ಳುವ ಸಮಯ ಬಂದಿದೆ. ಒಂದೋ ವ್ಯಕ್ತಿಗಳು ಅಥವಾ ಸಂಸ್ಥೆಗಳಿಂದ ಭೂಮಿಯನ್ನು ಅತಿಕ್ರಮಿಸಲಾಗಿದೆ ಅಥವಾ ಅದನ್ನು ವಿವಿಧ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ. ಶಾಸಕರು ತಮ್ಮ ಕ್ಷೇತ್ರಗಳನ್ನು ಚೆನ್ನಾಗಿ ತಿಳಿದಿರುವ ಕಾರಣ ನಾವು ಅವರ ಬೆಂಬಲವನ್ನು ಕೋರುತ್ತೇವೆ ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಸೇರಿ ರಾಜ್ಯದಾದ್ಯಂತ ಇನ್ನೂ 2 ದಿನ ಜಿಟಿಜಿಟಿ ಮಳೆ

ಅತಿಕ್ರಮಣ ದೊಡ್ಡ ಸಮಸ್ಯೆ:
ಹಲವೆಡೆ ಕೃಷಿ ಹೆಸರಿನಲ್ಲಿ ಭೂಮಿ ಒತ್ತುವರಿ ಮಾಡಲಾಗಿದೆ. ಬೆಟ್ಟದ ತುದಿಗಳು, ಸರೋವರದ ಬದಿಗಳು ಮತ್ತು ಅರಣ್ಯ ಭೂಮಿಯನ್ನು ಆಕ್ರಮಿಸಿಕೊಳ್ಳಲಾಗುತ್ತಿದೆ. ಅವರನ್ನು ತೆರವು ಮಾಡುವುದು ಸವಾಲಿನ ಕೆಲಸವಾಗಿ ಹೋಗಿದೆ. ಹಾಗೆ ಮಾಡಿದರೆ ಸರ್ಕಾರ ಮತ್ತು ಅಧಿಕಾರಿಗಳನ್ನು ರೈತ ವಿರೋಧಿ ಎಂದು ಬಿಂಬಿಸುತ್ತಾರೆ. ಈ ಜನರು ರೈತರಲ್ಲ, ಆದರೆ ಅತಿಕ್ರಮಣದಾರರಾಗಿದ್ದಾರೆ.

ಸ್ಮಶಾನಗಳೇ ಇಲ್ಲ: ರಾಜ್ಯದಲ್ಲಿ 2,000ಕ್ಕೂ ಹೆಚ್ಚು ಹಳ್ಳಿಗಳಿಗೆ ಸ್ಮಶಾನಗಳಿಲ್ಲ, ಆದರೆ ಇನ್ನೂ ಅನೇಕ ಗ್ರಾಮಗಳಿಗೆ ಸರಿಯಾದ ರಸ್ತೆಗಳಿಲ್ಲ. ಈ ಎಲ್ಲಾ ಸಮಸ್ಯೆಗಳಿಗೆ ಭೂಮಿಯ ಕೊರತೆ ಕಾರಣವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅತಿಕ್ರಮಣ ಮಾಡಿಕೊಳ್ಳುತ್ತಿರುವ ಜಮೀನುಗಳನ್ನು ಗುರುತಿಸಬೇಕಾಗಿದೆ. ಅದನ್ನು ಮೂಲಭೂತ ಸೌಲಭ್ಯಗಳ ನಿರ್ಮಾಣಕ್ಕೆ ಬಳಸಿಕೊಳ್ಳಬೇಕಾಗಿದೆ.

ಹಿಂದೂ ದೇವಾಲಯಗಳನ್ನೇ ಟಾರ್ಗೆಟ್ ಮಾಡಿದ್ದ ಕುಕ್ಕರ್ ಕ್ರಿಮಿ ಶಾರೀಕ್

ಭೂಮಿಯ ಬೆಲೆ ಹೆಚ್ಚುತ್ತಿದೆ ಮತ್ತು ಸರ್ಕಾರವು ಅಂತಹ ಹೆಚ್ಚಿನ ಬೆಲೆಗೆ ಆಸ್ತಿಗಳನ್ನು ಖರೀದಿಸಲು ಸಾಧ್ಯವಿಲ್ಲ. ಭವಿಷ್ಯಕ್ಕಾಗಿ ಭೂಮಿಯನ್ನು ಉಳಿಸುವ ಸಮಯ ಇದು. ಕೆಲವರಿಂದ ಅಥವಾ ಸಂಸ್ಥೆಗಳಿಂದ ಭೂಮಿಯನ್ನು ಅತಿಕ್ರಮಿಸಲಾಗುತ್ತಿದೆ. ಶಾಸಕರು ತಮ್ಮ ಕ್ಷೇತ್ರಗಳನ್ನು ಚೆನ್ನಾಗಿ ತಿಳಿದಿರುವ ಕಾರಣ ಅವರ ಬೆಂಬಲ ಕೋರುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

real, estate, business, government, schools, hospitals, space,

Articles You Might Like

Share This Article