Thursday, December 19, 2024
Homeರಾಜ್ಯ371(ಜೆ) ಅಡಿ 9695 ಹುದ್ದೆಗಳ ನೇಮಕ

371(ಜೆ) ಅಡಿ 9695 ಹುದ್ದೆಗಳ ನೇಮಕ

Recruitment of 9695 posts under 371(J)

ಬೆಳಗಾವಿ,ಡಿ.19- 371(ಜೆ ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9695 ಹ್ದುೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977 ಹ್ದುೆಗಳನ್ನು ಭರ್ತಿ ಮಾಡಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಪ್ರಶ್ನೆಗೆ ಉತ್ತರಿಸಿದರು. 371(ಜೆ ) ಅಡಿ ವಿವಿಧ ನೇಮಕಾತಿ ಸಂಸ್ಥೆಗಳಲ್ಲಿ 1658 ಹ್ದುೆಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು ಇನ್ನು 2035 ಹ್ದುೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕಿದೆ.

ಈಗಾಗಲೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ಕ್ರಮವಹಿಸಲು ಎಲ್ಲಾ ಇಲಾಖೆಗಳಿಗೆ ಖಾಲಿ ಇರುವ ಹ್ದುೆಗಳನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದೆ ಎಂದರು.

371 (ಜೆ) ಅಡಿಯಲ್ಲಿ ನೇಮಕವಾಗಿರುವ ನೌಕರರು ತೊಂದರೆ ಅನುಭವಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಸದರಿ ಅಂಶಗಳನ್ನು ಆದ್ಯತೆ ಮೇಲೆ ಚರ್ಚಿಸಿ, ಸಂಬಂಧಪಟ್ಟ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡುವುದರ ಮೂಲಕ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

RELATED ARTICLES

Latest News