Friday, February 23, 2024
Homeರಾಜ್ಯವಾರದೊಳಗೆ ಬರ ಪೀಡಿತ ತಾಲ್ಲೂಕಿನ ರೈತರಿಗೆ ಪರಿಹಾರ ಬಿಡುಗಡೆ

ವಾರದೊಳಗೆ ಬರ ಪೀಡಿತ ತಾಲ್ಲೂಕಿನ ರೈತರಿಗೆ ಪರಿಹಾರ ಬಿಡುಗಡೆ

ಬೆಳಗಾವಿ, ಡಿ.13- ಒಂದು ಬರ ಪೀಡಿತ ತಾಲ್ಲೂಕಿನ ರೈತರಿಗೆ ಎರಡು ಸಾವಿರ ರೂ.ವರೆಗಿನ ಬರ ಪರಿಹಾರವನ್ನು ಈ ವಾರದೊಳಗೆ ಪ್ರಾಯೋಗಿಕವಾಗಿ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿಂದು ಕಾಂಗ್ರೆಸ್ ಸದಸ್ಯ ರಾಜೇಂದ್ರ ರಾಜಣ್ಣ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬರಗಾಲದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಎರಡು ಸಾವಿರ ರೂ.ವರೆಗಿನ ಬರ ಪರಿಹಾರ ನೀಡುವ ಪ್ರಕ್ರಿಯೆಗೆ ಈ ವಾರದಲ್ಲಿ ಪ್ರಾರಂಭಿಸಲಾಗುವುದು ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವುದರಿಂದ ರಾಜ್ಯ ಸರಕಾರದ ವತಿಯಿಂದಲೇ 2 ಸಾವಿರ ರೂ.ವರೆಗಿನ ಬರ ಪರಿಹಾರವನ್ನು ವಿತರಿಸುವ ಪ್ರಕ್ರಿಯೆಗೆ ಈ ವಾರದಲ್ಲಿ ಒಂದು ತಾಲ್ಲೂಕಿನಿಂದ ಚಾಲನೆ ನೀಡಲಾಗುವುದು. ಕೇಂದ್ರ ಸರ್ಕಾರವು ನಮ್ಮ ನೆರವಿಗೆ ಬಂದಿದ್ದರೆ ಪರಿಸ್ಥಿತಿ ಈ ರೀತಿ ಆಗುತ್ತಿರಲಿಲ್ಲ ಎಂದು ಅವರು ಆಕ್ಷೇಪಿಸಿದರು.

ಕೇಂದ್ರ ಸರ್ಕಾರಕ್ಕೆ ರಾಜ್ಯದ ಪರಿಸ್ಥಿತಿ ವಿವರಿಸಲು ಮುಖ್ಯಮಂತ್ರಿಗಳು ಮೂರು ಬಾರಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ನಾವು ಕೇಂದ್ರದ ಗೃಹ ಹಾಗೂ ಕೃಷಿ ಸಚಿವರ ಭೇಟಿಗೆ ಅವಕಾಶ ಕೋರಿದರೂ ಕಾಲಾವಕಾಶ ಸಿಕ್ಕಿಲ್ಲ. ನಾವು ಸಂಬಂಧಪಟ್ಟ ಇಲಾಖೆಯ ಅಕಾರಿಗಳಿಗೆ ಮನವಿ ಪತ್ರಗಳನ್ನು ನೀಡಿ ಬರುವಂತಾಗಿದೆ. ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದೇವೆ ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರ ತನ್ನ ಮಾನದಂಡಗಳ ಅನುಸಾರ ರಾಜ್ಯದಲ್ಲಿ ಶೇ.44ರಷ್ಟು ಸಣ್ಣ, ಅತಿ ಸಣ್ಣ ರೈತರು ಇರುವುದಾಗಿ ಭಾವಿಸಿದೆ. ಆದರೆ, ನಮ್ಮ ಮಾಹಿತಿಯ ಪ್ರಕಾರ ಶೇ.70ರಷ್ಟು ಸಣ್ಣ, ಅತಿ ಸಣ್ಣ ರೈತರು ಇದ್ದಾರೆ. ಆಧಾರ್ ಜೋಡಣೆಯೊಂದಿಗೆ ಇರುವ ಈ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ. ಎನ್‍ಡಿಆರ್‍ಎಫ್ ಅಡಿಯಲ್ಲಿ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಿಸುವಂತೆಯೂ ಮನವಿ ಮಾಡಿದ್ದೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಬಿಜೆಪಿ ನಾಯಕರನ್ನು ಜೀವಂತ ಸಮಾಧಿ ಮಾಡಲು ಸಿಪಿಐ(ಎಂ) ನಿರ್ಧರಿಸಿತ್ತು : ಸಹಾ

ಪ್ರಸಕ್ತ ಸಾಲಿನ ಜೂನ್‍ನಲ್ಲಿ ವಾಡಿಕೆಗಿಂತ ಶೇ.57ರಷ್ಟು (ಕಡಿಮೆ), ಜುಲೈನಲ್ಲಿ ಶೇ.29ರಷ್ಟು(ಹೆಚ್ಚು), ಆಗಸ್ಟ್ ನಲ್ಲಿ ಶೇ.73ರಷ್ಟು(ಕಡಿಮೆ), ಸೆಪ್ಟಂಬರ್ ನಲ್ಲಿ ಶೇ.10ರಷ್ಟು ಹಾಗೂ ಅಕ್ಟೋಬರ್ ನಲ್ಲಿ ಶೇ.65ರಷ್ಟು ಕಡಿಮೆ ಮಳೆಯಾಯಿತು.85.95 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಇತ್ತು. 74 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಯಿತು. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾಗೂ 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆಯ ಕೊರತೆಯಿಂದ ಬೆಳೆ ನಷ್ಟವಾಯಿತು. ಮೂರು ಹಂತಗಳಲ್ಲಿ ಕ್ರಮವಾಗಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು ಎಂದರು.

ಮಹಾತ್ಮ ಗಾಂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯ ಉದ್ಯೋಗಕ್ಕೆ ಬರುವವರ ಕೂಲಿ ಬಾಕಿ ಇದೆ. ಹೀಗಾಗಿ ಕೇಂದ್ರ ಸರ್ಕಾರ 468 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದರು. ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಾನವ ದುಡಿಯುವ ದಿನಗಳನ್ನು ಹೆಚ್ಚುವರಿ 50 ದಿನ ನೀಡಬೇಕೆಂದು ಕಾನೂನು ಇದ್ದರೂ, ಕೇಂದ್ರ ಸರ್ಕಾರ ಅನುಮತಿಗೆ ಮೀನಾಮೇಷ ಎಣಿಸುತ್ತಿದೆ ಎಂದು ಅವರು ಆರೋಪಿಸಿದರು.

RELATED ARTICLES

Latest News