ಮುಂಬೈ,ಮಾ.26- ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪ್ರಮುಖ ಮಸೀದಿಯೊಂದರ ಗೋಡೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಧಾರ್ಮಿಕ ಘೋಷವಾಖ್ಯ ಬರೆದು ಕೋಮು ಗಲಭೆಗೆ ಕಾರಣವಾಗಿದ್ದು, ಸ್ಥಳದಲ್ಲಿ ಇನ್ನೂ ಉದ್ವಿಗ್ನ ವಾತಾವರಣವಿದೆ.
ಮಜಲ್‍ಗಾಂವ್‍ನ ಮರ್ಕಝಿ ಮಸೀದಿಯ ಗೋಡೆಯ ಮೇಲೆ ನಿನ್ನೆ ಸಂಜೆಯ ಈ ಘೋಷಣೆಯನ್ನು ಬರೆಯಲಾಗಿತ್ತು. ಇದರಿಂದ ರೊಚ್ಚುಗೆದ್ದ ಮುಸ್ಲಿಂ ಸಮುದಾಯದವರು ಮಸೀದಿ ಮತ್ತು ಸ್ಥಳೀಯ ಪೊಲೀಸ್ ಠಾಣೆಯ ಹೊರಗೆ ಸಾಕಷ್ಟು ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು.
ಈ ಸಂಬಂಧ ಎಫ್‍ಐಆರ್ ದಾಖಲಾಗಿದ್ದು, ಕೆಲವು ಸಮಾಜ ವಿರೋಧಿಗಳು ಮಸೀದಿಯ ಗೋಡೆಯ ಮೇಲೆ ಶ್ರೀರಾಮ ಎಂದು ಬರೆದಿದ್ದಾರೆ. ನಾವು ಸೆಕ್ಷನ್ 295 (ಉದ್ದೇಶಪೂರ್ವಕವಾಗಿ ಪೂಜಾ ಸ್ಥಳವನ್ನು ನಾಶಪಡಿಸಲು ಅಥವಾ ಅಪವಿತ್ರಗೊಳಿಸಲು)ರಡಿ ದೂರು ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾವು ದುಷ್ಕರ್ಮಿಯನ್ನು ಪತ್ತೆಹಚ್ಚುತ್ತಿದ್ದೇವೆ ಮತ್ತು ಘಟನೆಗೆ ಕಾರಣರಾದವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಮಜಲಗಾಂವ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಧೀರಜ್ ಕುಮಾರ್ ತಿಳಿಸಿದ್ದಾರೆ.