Saturday, December 21, 2024
Homeರಾಜ್ಯಸಾಹಿತ್ಯ ಸಮೇಳನದಲ್ಲಿ ರಾಜಕೀಯ ಪುಸ್ತಕ ತೆರವುಗೊಳಿಸಿ : ಆರ್.ಅಶೋಕ್ ಆಗ್ರಹ

ಸಾಹಿತ್ಯ ಸಮೇಳನದಲ್ಲಿ ರಾಜಕೀಯ ಪುಸ್ತಕ ತೆರವುಗೊಳಿಸಿ : ಆರ್.ಅಶೋಕ್ ಆಗ್ರಹ

Remove political books from Sahitya Sammelana : R. Ashok demands

ಬೆಂಗಳೂರು,ಡಿ.21- ಸಾಹಿತ್ಯ ಸಮೇಳನದ ಮಳಿಗೆಗಳಲ್ಲಿ ಇಟ್ಟಿರುವ ಎಲ್ಲ ರಾಜಕೀಯ ಪ್ರೇರಿತ ಪುಸ್ತಕಗಳನ್ನು ತೆರವು ಮಾಡಬೇಕು, ರಾಜಕೀಯ ಭಾಷಣಗಳಿಗೆ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡ ನಾಡಿನ ನುಡಿ ಪರಂಪರೆ, ಶ್ರೀಮಂತ ಸಾಹಿತ್ಯ, ಇತಿಹಾಸ, ಸಂಸ್ಕೃತಿಯನ್ನ ಸಂಭ್ರಮಿಸುವ ವೇದಿಕೆಯಾಗಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮೇಳನವನ್ನು ರಾಜಕೀಯ ವೇದಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಎಸಗಿದ್ದಾರೆ ಎಂದು ದೂರಿದ್ದಾರೆ.

ಮುಖ್ಯಮಂತ್ರಿಗಳ ಭಾಷಣದುದ್ದಕ್ಕೂ ರಾಜಕೀಯ ಕೆಸರೆರಚಾಟ, ಪುಸ್ತಕ ಮಳಿಗೆಗಳಲ್ಲಿ ರಾಜಕೀಯ ಪ್ರೇರಿತ ಪುಸ್ತಕಗಳ ಪ್ರದರ್ಶನ, ಮಾರಾಟ – ಇದೇನಾ ಸಾಹಿತ್ಯ ಸಮೇಳನದ ಉದ್ದೇಶ? ಎಂದು ಅಶೋಕ್ ಕಿಡಿಕಾರಿದ್ದಾರೆ.

RELATED ARTICLES

Latest News