Friday, November 22, 2024
Homeಮನರಂಜನೆಖ್ಯಾತ ನಿರೂಪಕಿ, ನಟಿ ಅಪರ್ಣ ವಿಧಿವಶ : ಇಂದು ಅಂತ್ಯ ಸಂಸ್ಕಾರ

ಖ್ಯಾತ ನಿರೂಪಕಿ, ನಟಿ ಅಪರ್ಣ ವಿಧಿವಶ : ಇಂದು ಅಂತ್ಯ ಸಂಸ್ಕಾರ

ಬೆಂಗಳೂರು : ಅಚ್ಚ ಕನ್ನಡದ ಮೂಲಕ ಕನ್ನಡಿಗರ ಮನ ಗೆದ್ದಿದ್ದ ಖ್ಯಾತ ನಿರೂಪಕಿ ಅಪರ್ಣ ಅವರು ಕ್ಯಾನ್ಸರ್ ಕಾಯಿಲೆಯಿಂದ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಕ್ಯಾನ್ಸರ್ ಗೆ ತುತ್ತಾಗಿದ್ದ ಅಪರ್ಣ ಅವರು ಶುಕ್ರವಾರ ರಾತ್ರಿ ಬೆಂಗಳೂರಿನ ಬನಶಂಕರಿ ಎರಡನೇ ಹಂತದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.ಮೃತರು ಪತಿ ಹಾಗೂ ಖ್ಯಾತ ಲೇಖಕ ನಾಗರಾಜ ವಸ್ತಾರೆ ಸೇರಿದಂತೆ ಅನೇಕರನ್ನು ಬಿಟ್ಟು ಅಗಲಿದ್ದಾರೆ.

ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.ಮೃತರ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿರುವ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು.

ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.ಬೆಂಗಳೂರು ದೂರದರ್ಶನದಲ್ಲಿ ಸಿನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು.

ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ ಅವರು ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರವನ್ನು ಅಪರ್ಣಾ ಮಾಡಿದ್ದರು.

ಬಹುಮುಖ ಪ್ರತಿಭೆಯ ಅಪರ್ಣಾ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಅಂಕಣ ಬರೆಯುವ ಮೂಲಕ ಓದುಗರಿಗೂ ಹತ್ತಿರವಾಗಿದ್ದರು. ಅಪರ್ಣಾ ತಂದೆ ಕನ್ನಡ ಪ್ರಭ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದರು. ಮೊದಲ ಮದುವೆಯಿಂದ ವಿಚ್ಚೇದನ ಪಡೆದಿದ್ದ ಅಪರ್ಣಾ, ಖ್ಯಾತ ಲೇಖಕ ನಾಗರಾಜ ವಸ್ತಾರೆ ವರಿಸಿದ್ದರು.

2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದ ಅಪರ್ಣಾ ರಿಯಾಲಿಟಿ ಶೋಗಳಲ್ಲೂ ಸೈ ಎನಿಸಿಕೊಂಡಿದ್ರು. ಇನ್ನು 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಹಾಸ್ಯ ನಟಿಯಾಗಿಯೂ ಜನರ ಮನಗೆದ್ದಿದ್ದರು.

90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು

RELATED ARTICLES

Latest News