Sunday, May 19, 2024
Homeರಾಜ್ಯದಾವಣಗೆರೆ ಲೋಕಸಭಾ ಕ್ಷೇತ್ರದ ಸಂಚಾಲಕರಾಗಿ ರೇಣುಕಾಚಾರ್ಯ ನೇಮಕ

ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಚಾಲಕರಾಗಿ ರೇಣುಕಾಚಾರ್ಯ ನೇಮಕ

ಬೆಂಗಳೂರು,ಮಾ.29-ಟಿಕಟ್ ಸಿಗದೆ ಪಕ್ಷದ ವರಿಷ್ಠರ ವಿರುದ್ಧವೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.

ಈ ಕ್ಷೇತ್ರದಿಂದ ಗಾಯತ್ರಿ ಸಿದ್ದೇಶ್ವರ್‍ಗೆ ಟಿಕೆಟ್ ನೀಡಿದ್ದಕ್ಕೆ ಬೇಸರಗೊಂಡಿದ್ದ ಅವರು, ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಇದೀಗ ಅವರನ್ನು ದಾವಣಗೆರೆ ಜಿಲ್ಲಾ ಸಂಚಾಲರನ್ನಾಗಿ ನೇಮಕ ಮಾಡುವ ಮೂಲಕ ಭಿನ್ನಮತ ಶಮನಕ್ಕೆ ಪಕ್ಷದ ವರಿಷ್ಠರು ಕೈ ಹಾಕಿದ್ದಾರೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್‍ವಾಲ್ ಅವರ ಸೂಚನೆ ಮೇರೆಗೆ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ನೇಮಕ ಮಾಡಿ ತಮ್ಮ ಆದೇಶ ಹೊರಡಿಸಿದ್ದಾರೆ.

RELATED ARTICLES

Latest News