ಚಂದ್ರಶೇಖರ್ ಸಾವಿನ ಕುರಿತು ಸಮಗ್ರ ತನಿಖೆ : ಸಿಎಂ ಬೊಮ್ಮಾಯಿ

Social Share

ಬೆಂಗಳೂರು,ನ.6- ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅನುಮಾನಸ್ಪದ ಸಾವಿನ ಪ್ರಕರಣದಲ್ಲಿ ಸಣ್ಣ ಸುಳಿವನ್ನು ಬಿಡದೆ ಎಲ್ಲ ಆಯಾಮಗಳಲ್ಲಿ ಸಮಗ್ರ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಆರ್‍ಟಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಾವರ್ಜನಿಕರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಶಾಸಕ ರೇಣುಕಾಚಾರ್ಯ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.

ಯಾವುದೇ ಅನುಮಾನಗಳಿದ್ದರೂ ಸಣ್ಣಪುಟ್ಟ ಬೆಳವಣಿಗೆಗಳಿದ್ದರೂ ಅದನ್ನು ನನ್ನ ಗಮನಕ್ಕೆ ತನ್ನಿ. ಸಮಗ್ರ ತನಿಖೆಗೆ ನಿರ್ದೇಶನ ನೀಡುತ್ತೇನೆ ಎಂದು ಶಾಸಕರಿಗೆ ಭರವಸೆ ನೀಡಿದ್ದೇನೆ. ಯಾವ ಅನುಮಾನಗಳನ್ನು ಉಳಿಯದಂತೆ ತನಿಖೆ ನಡೆಸಲು ಪೊಲೀಸರಿಗೆ ನಿರ್ದೇಶನ ನೀಡುವುದಾಗಿ ಹೇಳಿದರು.

Articles You Might Like

Share This Article