ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆಪ್ಟೆಂಬರ್ ಮೊದಲ ವಾರದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆ.!

ಬೆಂಗಳೂರು, ಆ.21- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪಣ ಪಟ್ಟಿಯನ್ನು ಮುಂದಿನ ತಿಂಗಳ ಮೊದಲ ವಾರದಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸಲ್ಲಿಸಲಿದ್ದಾರೆ.ವಿಜಯನಗರದ ಉಪ ವಿಭಾಗದ ಪೊಲೀಸರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರ ಮಾರ್ಗದರ್ಶನದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಈಗಾಗಲೇ ಶೇ.70ರಷ್ಟು ಸಾಂದರ್ಭಿಕ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಬೆಂಗಳೂರಿನ ವಿಧಿ-ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ಸಾಕ್ಷ್ಯಗಳ ಪೈಕಿ ಶೇ.90ರಷ್ಟು ವರದಿ ಬಂದಿದೆ. … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆಪ್ಟೆಂಬರ್ ಮೊದಲ ವಾರದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆ.!