ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಳೆ ದರ್ಶನ್‌ ಅಂಡ್ ಗ್ಯಾಂಗ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ..?

ಬೆಂಗಳೂರು,ಸೆ.8- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ ಮತ್ತು ಸಂಗಡಿಗರು ನಾಳೆ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.ಕೊಲೆ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಪೊಲೀಸರು ಈಗಾಗಲೇ ನಗರದ 24 ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿರುವ ದರ್ಶನ್‌, ಈವರೆಗೂ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ದೋಷಾರೋಪಣ ಪಟ್ಟಿ ಸಲ್ಲಿಕೆಯ ಬಳಿಕ ಜಾಮೀನು ಅರ್ಜಿಯ ಬಗ್ಗೆ ಪರಿಶೀಲನೆ ನಡೆಸುವುದಾಗಿ ದರ್ಶನ್‌ ಪರ ವಕೀಲರು ಹೇಳಿಕೆ ನೀಡಿದ್ದರು. ಕಳೆದ ಗುರುವಾರ ನ್ಯಾಯಾಲಯಕ್ಕೆ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಳೆ ದರ್ಶನ್‌ ಅಂಡ್ ಗ್ಯಾಂಗ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ..?