Sunday, September 8, 2024
Homeರಾಜ್ಯರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ರಘು ತಾಯಿ ನಿಧನ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ರಘು ತಾಯಿ ನಿಧನ

ಬೆಂಗಳೂರು,ಜು.20- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ರಘು ಅವರ ತಾಯಿ ಮಂಜುಳಮ್ಮ(75) ಇಂದು ಮುಂಜಾನೆ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಂಜುಳಮ್ಮ ಅವರನ್ನು ಮತ್ತೊಬ್ಬ ಮಗ ಮುರುಳಿ ಅವರು ಕೋಳಿಬುರುಜನ ಹಟ್ಟಿಯ ತಮ್ಮ ಮನೆಯಲ್ಲಿ ಆರೈಕೆ ಮಾಡುತ್ತಿದ್ದರು. ಇಂದು ಮುಂಜಾನೆ 5 ಗಂಟೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಅಂಡ್ ಗ್ಯಾಂಗ್‍ನಲ್ಲಿ ರಘು 4ನೇ ಆರೋಪಿ. ಈತ ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷನಾಗಿದ್ದು, ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

RELATED ARTICLES

Latest News