ಲಾಲ್‍ಬಾಗ್‍ನಲ್ಲಿ ವೈಭವದ ಫಲಪುಷ್ಪ ಪ್ರದರ್ಶನ ಆರಂಭ

Social Share

ಬೆಂಗಳೂರು,ಜ.20- ನಗರದ ಜನತೆಯ ಪ್ರಮುಖ ಆಕರ್ಷಣೆಗಳಲ್ಲೊಂದಾದ ಬಹುನಿರೀಕ್ಷಿತ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‍ಬಾಗ್‍ನ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ 10 ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ನೀಡಿದರು.

ಗಣರಾಜ್ಯೋತ್ಸವದ ಅಂಗವಾಗಿ ಪ್ರತಿ ವರ್ಷ ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಮೊದಲ ದಿನದ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ, ತೋಟಗಾರಿಕೆ ಸಚಿವ ಮುನಿರತ್ನ ಮತ್ತಿತರ ಅಧಿಕಾರಿಗಳು ಸಂಪ್ರದಾಯದಂತೆ ಚಾಲನೆ ನೀಡಿ ಶುಭ ಕೋರಿದರು.

ಇಂದಿನಿಂದ ಒಟ್ಟು 10 ದಿನಗಳ ಕಾಲ ನಡೆಯಲಿರುವ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಅಂದಾಜು 15ರಿಂದ 20 ಲಕ್ಷ ಸಾರ್ವಜನಿಕರು ವೀಕ್ಷಣೆ ಮಾಡುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಇಂದು ಬಹಳ ಸಂತೋಷದಿಂದ 213 ಪ್ಲವರ್ ಶೋ ಉದ್ಘಾಟನೆ ಮಾಡಿದ್ದೇನೆ. ಈ ಬಾರಿಯ ಫ್ಲವರ್ ಶೋ ತುಂಬ ಚೆನ್ನಾಗಿ ಮೂಡಿಬಂದಿದೆ.

ಪ್ರತಿವರ್ಷ ಲಕ್ಷಗಟ್ಟಲೆ ಜನರು ಈ ಫ್ಲವರ್ ಶೋಗೆ ಬರುತ್ತಾರೆ. ಈ ಬಾರಿ 10 ರಿಂದ 15 ಲಕ್ಷ ಜನರು ಬರುವ ನಿರೀಕ್ಷೆಯಿದೆ. ಜನರನ್ನು ನಿಭಾಯಿಸುವುದಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೋಟಗಾರಿಕೆ ಇಲಾಖೆ ಮಾಡಿಕೊಂಡಿದೆ ಎಂದರು.

ನಮ್ಮದು ಅಭಿವೃದ್ಧಿ ಪಥದ ರಾಜಕೀಯ : ಸಚಿವ ಅಶೋಕ್

ನಗರದಲ್ಲಿ ತೋಟಗಾರಿಕೆಯ ಹಸೀರಿಕರಣ ಹೆಚ್ಚಿಸಲು ಅನುದಾನ ಮೀಸಲಿಡುತ್ತಿದ್ದೇವೆ. ಈ ವರ್ಷದ ಬಜೆಟ್‍ನಲ್ಲಿ 100 ಕೋಟಿ ರೂ. ಮೀಸಲಿಟ್ಟಿದ್ದೇವೆ. ಗುಡ್ಡಗಾಡು ಪ್ರದೇಶದಲ್ಲಿ ಹಸೀಕರಣ ಮಾಡುತ್ತೇವೆ ಎಂದರು.

ಈ ಫಲಪುಷ್ಪ ಪ್ರದರ್ಶನದಿಂದ ಸಸ್ಯ ಸಂಪತ್ತು ಪ್ರದರ್ಶನ ಆಗುತ್ತಿದೆ. ರಾಜ್ಯಾದ್ಯಂತ ಹಸಿರು ವಿಸ್ತರಣೆ ಆಗಬೇಕಿದೆ. ರಾಜ್ಯದ ತೋಟಗಾರಿಕೆಯಿಂದ ಹಸಿರು ಹೆಚ್ಚಾಗಿ, ಉತ್ಪಾದನೆ ಹೆಚ್ಚಾಗುತ್ತದೆ ಎಂದು ಹೇಳಿದರು.

ಬೆಂಗಳೂರು ಗಾರ್ಡನ್ ಸಿಟಿ ಎಂದು ಹೆಸರಾಗಿತ್ತು. ಇತ್ತೀಚಿನ ದಿನಗಳಲ್ಲಿ ಗಾರ್ಡನ್ ಸಿಟಿ ಅಭಿವೃದ್ಧಿ ಕಡಿಮೆಯಾಗಿದೆ. ಇನ್ನು ಮುಂದೆ ಗಾರ್ಡಾನ್ ಸಿಟಿ ಹೆಸರಿಗೆ ತಕ್ಕಂತೆ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುತ್ತೇವೆ. ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿ ಬಿಬಿಎಂಪಿ ಪಾರ್ಕ್ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ನಗರದ ಹೊರವಲಯದಲ್ಲಿ ಗಾರ್ಡನ್‍ಗಳ ಅಭಿವೃದ್ಧಿ ಮಾಡಲಾಗುತ್ತದೆ. ಗಾರ್ಡನ್ ಸಿಟಿಯ ಗತವೈಭವ ಮತ್ತೆ ಮರುಕಳಿಸಲಿ ಎಂದು ಹೇಳಿದರು.

ತೋಟಗಾರಿಕಾ ಸಚಿವ ಮುನಿರತ್ನ ಮಾತನಾಡಿ, ಈ ಪುಷ್ಪ ಪ್ರದರ್ಶನದಲ್ಲಿ ಕೆಂಪೇಗೌಡರು, ಟಿಪ್ಪು ಸುಲ್ತಾನ್, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಬೆಂಗಳೂರಿಗೆ ನೀಡಿದ ವಿಶೇಷ ಕೊಡುಗೆಯನ್ನು ಪ್ರದರ್ಶನದಲ್ಲಿ ಬಿಂಬಿಸಲಾಗುತ್ತದೆ ಎಂದು ತಿಳಿಸಿದರು.

ಈ ಬಾರಿಯ ವಿಶೇಷ: ಪ್ರತಿವರ್ಷ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ಒಂದು ವಿಷಯವನ್ನಿಟ್ಟುಕೊಂಡು ಅಲಂಕಾರ, ಫಲಪುಷ್ಪ ಪ್ರದರ್ಶನ ಮಾಡಲಾಗುತ್ತದೆ. ಹಾಲೆಂಡ್, ಕೊಲಂಬಿಯಾ, ಇಸ್ರೇಲ್, ಚಿಲಿ, ನೆದರ್ ಲ್ಯಾಂಡ್ಸ್, ಬೆಲ್ಜಿಯಂ, ಕೀನ್ಯಾ, ಆಸ್ಟ್ರೇಲಿಯಾ, ಯಥೋಪಿಯಾ ಸೇರಿದಂತೆ 11 ವಿದೇಶಗಳ 69 ಜಾತಿಯ ಹೂಗಳನ್ನು ಪ್ರದರ್ಶಿಸಲಾಗುತ್ತಿದೆ. ಡಾರ್ಜಿಲಿಂಗ್ ನ ಸಿಂಬಡಿಯ ಆರ್ಕಿಡ್ಸ್ ಹೂವು ಈ ಬಾರಿಯ ಪ್ರದರ್ಶನದ ಮುಖ್ಯ ಆಕರ್ಷಣೆಯಾಗಿದೆ.

ಅಷ್ಟೇ ಅಲ್ಲ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ಸಿಕ್ಕಿಂ ಸೇರಿದಂತೆ ಇನ್ನು 5 ರಾಜ್ಯಗಳ ಹೂವುಗಳು ಕೂಡ ಪ್ರದರ್ಶನದಲ್ಲಿ ಇರಲಿವೆ.ವಿಶೇಷವಾಗಿ ಗರ್ಬೆರಾ, ಸಿಂಬಿಡಿಯಮ್ ಆರ್ಕಿಡ್‍ಗಳು, ಕಾರ್ನೇಷನ್‍ಗಳು, ಲಿಲ್ಲಿಗಳು ಮತ್ತು ಇತರ ತಳಿಗಳಂತಹ ಹೂವುಗಳನ್ನು ಲಾಲ್‍ಬಾಗ್ ಪುಪ್ಪ ಪ್ರದರ್ಶನಕ್ಕೆ ಇಡಲಾಗಿದೆ.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆ ಜಾರಿ

ಈ ಬಾರಿಯ ಲಾಲ್‍ಬಾಗ್‍ನ ಪ್ರಮುಖ ಆಕರ್ಷಣೆಗಳಲ್ಲಿ ಗ್ಲಾಸ್ ಹೌಸ್‍ನಲ್ಲಿ ಬೋನ್ಸಾಯ್ ಮರಗಳು, ವಿವಿಧ ಜಾತಿ ಹಣ್ಣು ಮತ್ತು ತರಕಾರಿಗಳಿಂದ ಪಿರಮಿಡ್‍ಗಳನ್ನು ವಿನ್ಯಾಸಗೊಳಿಸಲಾಗಿದೆ.

ಲಾಲ್‍ಬಾಗ್‍ನ 4 ಪ್ರವೇಶ ಕೇಂದ್ರಗಳಲ್ಲಿ ಬೆಂಗಳೂರಿನ ಶ್ರೀಮಂತ ಇತಿಹಾಸದ ಬಗ್ಗೆ ಸಾರುವ ಪ್ರದರ್ಶನಗಳು ಮತ್ತು ವಿವರಗಳನ್ನು ತಿಳಿಯಲು ಸಂದರ್ಶಕರಿಗೆ ಕಿಖ ಕೋಡ್‍ಗಳನ್ನು ನೀಡಲಾಗುತ್ತದೆ. ಪ್ರದರ್ಶನಕ್ಕೆ 12 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ. ಜೊತೆಗೆ ನಾಲ್ಕು ಗೇಟ್‍ಗಳಲ್ಲಿ ಟಿಕೆಟ್ ಕೌಂಟರ್‍ಗಳನ್ನು ತೆರೆಯಲಾಗಿದೆ.

ಪ್ರವೇಶ ಶುಲ್ಕ: ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 70 ರೂ. ರಜಾ ದಿನಗಳಲ್ಲಿ 75 ರೂ. ನಿಗದಿ ಮಾಡಲಾಗಿದೆ. 12 ವರ್ಷ ಒಳಗಿನ ಮಕ್ಕಳಿಗೆ ಎಲ್ಲಾ ದಿನಗಳಲ್ಲಿ 30 ರೂ. ನಿಗಡಿಪಡಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಾಲ್ಕು ಗೇಟ್‍ಗಳಲ್ಲಿ ಟಿಕೆಟ್ ಕೌಂಟರ್ ವ್ಯವಸ್ಥೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿದೆ.

Republic Day 2023, Bengaluru, iconic, Lalbagh, flower, show,

Articles You Might Like

Share This Article