ಬೆಂಗಳೂರು,ಜ.25- ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ನಾಳೆ ನಡೆಯಲ್ಲಿರೋ 74 ನೇ ಗಣರಾಜ್ಯೋತ್ಸವ ಅಚರಣೆ ಸಂದರ್ಭದಲ್ಲಿ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಾಟ ಮಾಡಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ತಿಳಿಸಿದ್ದಾರೆ.
ಗಣರಾಜ್ಯೋತ್ಸವ ಆಚರಣೆಗಾಗಿ ಮೈದಾನವನ್ನು ಸ್ವಚ್ಚಗೊಳಿಸಲಾಗುತ್ತಿದ್ದು, ನಾಳೆ ಬೆಳಿಗಿನ ಧ್ವಜಾರೋಹಣಕ್ಕೆ
ಕಂದಾಯ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ ಎಂದು ಅವರು ವಿವರಣೆ ನೀಡಿದ್ದಾರೆ.
ಈದ್ಗಾ ಮೈದಾನದಲ್ಲಿ ನಾಳೆ ಕೇವಲ ರಾಷ್ಟ್ರ ಧ್ವಜಾರೋಹಣ ಮಾತ್ರ ನೆರವೇರಿಸಲಾಗುವುದು ಉಳಿದಂತೆ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಶಾಲ ಮಕ್ಕಳನ್ನು ಕರೆಸಿ ಧ್ವಜಾರೋಹಣ ಮಾಡಿಸುವುದರ ಜೊತೆಗೆ ಸ್ಥಳೀಯ ಶಾಸಕರು, ಸಂಸದರು ಹಾಗೂ ಚಾಮರಾಜಪೇಟೆ ನಾಗರಿಕ ವೇದಿಕೆ ಪದಾಧಿಕಾರಿಗಳಿಗೆ ಆಹ್ವಾನ ನೀಡಲಾಗಿದೆ.
ಬಿಜೆಪಿಯಲ್ಲಿ ರಾಜಾಹುಲಿ ಬಿಎಸ್ವೈಗೆ ಇದೀಗ ಭಾರೀ ಬೇಡಿಕೆ
ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಗಣ ರಾಜ್ಯೋತ್ಸವ ನೆರವೇರುತ್ತಿರುವುದರಿಂದ ಮೈದಾನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
50 ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಅಳವಡಿಕೆ. ಬೃಹತ್ ಕಟ್ಟಡ ಗಳ ಮೇಲೆ ಐ ವಾಚರ್ಗಳನ್ನು ಸ್ಥಾಪಿಸಲಾಗಿದೆ ಎಂದು ದಯಾನಂದ್ ವಿವರಣೆ ನೀಡಿದ್ದಾರೆ.
Republic Day, Chamarajapet, Idgah Maidan,