ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತಿರಂಗಾ

Social Share

ಬೆಂಗಳೂರು,ಜ.26- ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಆಚರಿಸಲಾಯಿತು. ಬಿಗಿ ಪೊಲೀಸ್ ಬಂದೋಬಸ್ತ್‍ನಲ್ಲಿ ನಡೆದ 74ನೇ ಗಣರಾಜ್ಯೋತ್ಸವದಲ್ಲಿ ಬೆಂಗಳೂರು ಉತ್ತರ ಅಸಿಸ್ಟೆಂಟ್ ಕಮೀಷನರ್ ಡಾ.ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.

ಮುಂಜಾಗೃತಾ ಕ್ರಮವಾಗಿ ಮೈದಾನದ ಸುತ್ತ 4 ಎಸಿಪಿ, 10 ಇನ್ಸ್‍ಪೆಕ್ಟರ್‍ಗಳು, 40 ಎಸ್‍ಐಗಳು, 300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಇದರ ಜತೆಗೆ 6 ಕೆಎಸ್‍ಆರ್‍ಪಿ ತುಕಡಿಗಳನ್ನು ಕಾಯ್ದಿರಿಸಲಾಗಿತ್ತು.ಮೈದಾನದ ಸುತ್ತ 50 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಬೃಹತ್ ಕಟ್ಟಡಗಳ ಮೇಲೆ ವಾಚರ್‍ಗಳನ್ನು ಸ್ಥಾಪನೆ ಮಾಡಲಾಗಿತ್ತು.

ಸಂಸದ ಪಿ.ಸಿ ಮೋಹನ್ ಮಾತನಾಡಿ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಆಚರಣೆ ಮಾಡಿದ್ದೀವಿ, ಮುಂದಿನ ದಿನಗಳಲ್ಲಿ ಇನ್ನು ಅದ್ದೂರಿಯಾಗಿ ಸಂಭ್ರಮಾಚರಣೆ ಮಾಡುವುದಾಗಿ ತಿಳಿಸಿದರು.

ಗಣರಾಜ್ಯೋತ್ಸವಕ್ಕೆ ಗೈರಾದ ತೆಲಂಗಾಣ ಸಿಎಂ

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಇಲಾಖೆಗೆ ಪತ್ರ ಬರೆದಿದ್ದೆ ನಾನು ಎಂದು ಸ್ಥಳೀಯ ಶಾಸಕ ಜಮೀರ್ ಆಹ್ಮದ್‍ಖಾನ್ ಹೇಳಿದರು.
ಮೈದಾನದಲ್ಲಿ ಹಿಂದೂ ಹಬ್ಬ ಆಚರಣೆಗೆ ಅವಕಾಶ ನೀಡಲಾಗುವುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಸಿಡಿಮಿಡಿಗೊಂಡ ಶಾಸಕರು ಇದು ನನ್ನ ಸ್ವತ್ತಲ್ಲ. ಕಂದಾಯ ಇಲಾಖೆಯದು ಅವರನ್ನು ಕೇಳಿ ಎಂದು ಸ್ಥಳದಿಂದ ಹೊರ ನಡೆದರು.

ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಮತ್ತಿತರ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಜರಿದ್ದರು. 200ಕ್ಕೂ ಹೆಚ್ಚು ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.

Republic Day, celebrate, Chamarajpet, Idgah Maidan,

Articles You Might Like

Share This Article