ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಇನ್ನೂ ನಿರ್ಧಾರವಾಗಿಲ್ಲ : ಜಿಲ್ಲಾಧಿಕಾರಿ

Social Share

ಬೆಂಗಳೂರು,ಜ.24- ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚಾರಣೆ ಬಗ್ಗೆ ಇನ್ನು ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ತಿಳಿಸಿದರು.

ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಸರ್ಕಾರದ ಆದೇಶಕ್ಕೆ ಕಾಯಲಾಗುತ್ತಿದೆ ಎಂದರು.

ಈದ್ಗಾ ಮೈದಾನದಲ್ಲಿ ಗಣ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಈಗಾಗಲೇ ಹಲವಾರು ಸಂಘಟನೆಗಳು ನಮಗೆ ಮನವಿ ಮಾಡಿಕೊಂಡಿವೆ. ಈ ವಿಚಾರವಾಗಿ ನಾನು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಚರ್ಚಿಸಿದಾಗ ಅವರು ಕಳೆದ ಬಾರಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿದಂತೆ ಈ ಬಾರಿ ಗಣ ರಾಜ್ಯೋತ್ಸವ ಆಚರಣೆ ಮಾಡಿ ಅಂತ ಸೂಚನೆ ನೀಡಿದ್ದಾರೆ.

ಅಶೋಕ್ ಅವರ ಸೂಚನೆ ಮೇರೆಗೆ ನಾನು ಸರ್ಕಾರದ ಕಾರ್ಯದರ್ಶಿಗಳನ್ನು ಸಂಪರ್ಕಿಸಿದಾಗ ಚಾಮರಾಜಪೇಟೆ ಆಟದ ಮೈದಾನದ ವಿಚಾರ ಸುಪ್ರೀಂ ಕೋರ್ಟ್‍ನಲ್ಲಿರುವುದರಿಂದ ಕಾನೂನು ಅಭಿಪ್ರಾಯ ಪಡೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಡೇರದ ಬೇಡಿಕೆ, ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

ಕಾನೂನು ಅಭಿಪ್ರಾಯ ಇಂದು ಸಂಜೆ ವೇಳೆಗೆ ಬರಲಿದ್ದು, ನಂತರವಷ್ಟೇ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಸರ್ಕಾರದ ಆದೇಶ ಬಂದ ನಂತರವಷ್ಟೆ ನಾವು ಗಣರಾಜ್ಯೋತ್ಸವ ಆಚರಣೆ ಕುರಿತಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಕಾರಿ ದಯಾನಂದ್ ತಿಳಿಸಿದರು.

Republic Day, celebration, Idgah Maidan, Chamarajpet,

Articles You Might Like

Share This Article