Wednesday, February 28, 2024
Homeರಾಜ್ಯರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಎಲ್ಲೆಡೆ ಬಿಗಿ ಪೊಲಿಸ್ ಬಂದೋಬಸ್ತ್

ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಎಲ್ಲೆಡೆ ಬಿಗಿ ಪೊಲಿಸ್ ಬಂದೋಬಸ್ತ್

ಬೆಂಗಳೂರು, ಜ.24- ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಿಗಿ ಪೊಲಿಸ್ ಬಂದೋಬಸ್ತ್ ಮಾಡಲಾಗಿದ್ದು , ಅಧಿಕಾರಿಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಪೊಲಿಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲಿಸ್ ಆಯುಕ್ತರಾದ ಬಿ.ದಯಾನಂದ ಅವರು ತಿಳಿಸಿದ್ದಾರೆ.

ಪತ್ರೀಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಸುಲಲಿತವಾಗಿ ನಡೆಯಲು ಹಾಗೂ ಮೈದಾನದ ಭದ್ರತೆಯ ಸಲುವಾಗಿ ಮುಂಜಾಗರೂಕತಾ ಕ್ರಮಗಳಾಗಿ ಕಳೆದ 15 ದಿನಗಳಿಂದ ಮೈದಾನಕ್ಕೆ ಪೊಲೀಸರನ್ನು ಕಣ್ಗಾವಲು ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ ಎಂದು ಹೇಳಿದರು.

ನಗರದ ಎಲ್ಲಾ ಹೋಟೆಲ್, ಲಾಡ್ಜ್ ಗಳು ತಂಗುದಾಣಗಳು, ಇನ್ನಿತರೆ ಸ್ಥಳಗಳಲ್ಲಿ ಅನುಮಾನಾಸ್ಪದವಾಗಿ ವಾಸ್ತವ್ಯ ಹೂಡುವವರ ಮೇಲೆ ಸೂಕ್ತ ನಿಗಾವಹಿಸಲಾಗಿರುತ್ತದೆ ಎಂದು ಅವರು ಹೇಳಿದರು.ಕಾರ್ಯಕ್ರಮದ ದಿನದಂದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲಾ ವಿಭಾಗಗಳಿಂದ 9 ಡಿಸಿಪಿ,16 ಮಂದಿ ಎಸಿಪಿ, 45 ಮಂದಿ ಇನ್ಸ್ಪೆಕ್ಟರ್, 109 ಮಂದಿ ಪಿ ಎಸ್ ಐ – ಮಹಿಳಾ ಪಿ ಎಸ್ ಐ, 77 ಎ ಎಸ್ ಐ, 594 ಹೆಡ್ ಕಾನ್ಸಟೇಬಲ್, ಕಾನ್ಸಟೇಬಲ್, 87 ಮಹಿಳಾ ಸಿಬ್ಬಂದಿಗಳೊಂದಿಗೆ 184 ಸಾದಾ ಉಡುಪಿನ ಅಧಿಕಾರಿ, ಸಿಬ್ಬಂದಿಗಳು ಮತ್ತು 56 ಮಂದಿ ಕ್ಯಾಮೆರಾ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ ಎಂದು ಅವರು ತಿಳಿಸಿದರು.

ಸಂಚಾರ ನಿರ್ವಹಣೆಗಾಗಿ 4 ಮಂದಿ ಡಿಸಿಪಿ, 6 ಮಂದಿ ಎಸಿಪಿ, 21 ಮಂದಿ ಇನ್ಸ್ಪೆಕ್ಟರ್, 33 ಮಂದಿ ಪಿ ಎಸ್ ಐ, 97 ಎ ಎಸ್ ಐ, 41 ಹೆಚ್ಸಿ-ಪಿಸಿ ಸೇರಿದಂತೆ ಒಟ್ಟಾರೆ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದ ಪ್ರಯುಕ್ತ ಒಟ್ಟು 575 ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯದಲ್ಲಿರುತ್ತಾರೆ ಎಂದು ಅವರು ಹೇಳಿದರು.

ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ನಿಯಂತ್ರಣಕ್ಕೆಪೊಲೀಸರ ಹರಸಾಹಸ

ಅಲ್ಲದೆ ಮೈದಾನದ ಬಂದೋಬಸ್ತ್ ಕರ್ತವ್ಯಕ್ಕೆ 10 ಮಂದಿ ಕೆ.ಎಸ್.ಆರ್.ಪಿ-ಸಿ.ಎ.ಆರ್. ತುಕಡಿಗಳನ್ನು,, 2 ಅಗ್ನಿಶಾಮಕ ವಾಹನಗಳು, 2 ಆಂಬುಲೆನ್ಸ್ ವಾಹನಗಳು, 4 ಖಾಲಿ ವಾಹನಗಳು, 1 ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಡಿ-ಸ್ಟಾಟ್, 1ಆರ್.ಐ.ವಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ ಹಾಗೂ ಗರುಡ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗಿದೆ.

ಮೈದಾನದ ಸುತ್ತ ಎಲ್ಲಾ ಘಟನೆಗಳನ್ನು ಸೂಕ್ಷ್ಮವಾಗಿ ನಿಗಾವಹಿಸಲು 100 ಸಿ.ಸಿ.ಟಿ.ವಿ ಕ್ಯಾಮರಾಗಳನ್ನು ಮತ್ತು ಮೈದಾನದಲ್ಲಿ ಆಗಮಿಸುವವರ ತಪಾಸಣೆಗೆ 3 ಬ್ಯಾಗೇಜ್ ಸ್ಕ್ಯಾನರ್, 20 ಡಿಎಫ್ಎಂಡಿ ಮತ್ತು ಹೆಚ್.ಹೆಚ್.ಎಂ.ಡಿ.ಗಳನ್ನು ಅಳವಡಿಸಲಾಗಿರುತ್ತದೆ.
ಗಣರಾಜ್ಯೋತ್ಸವದ ಆಚರಣೆ ಸಂಬಂಧ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಗೇಟ್ ನಂ.2ರಲ್ಲಿ, ಬಿಳಿ ಬಣ್ಣದ ವಿ.ಐ.ಪಿ. ಪಾಸ್ ಹೊಂದಿರುವವರಿಗೆ, ಗೇಟ್ ನಂ-3 ರಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಗೇಟ್ ನಂ-4 ರಲ್ಲಿ ವಿ.ವಿ.ಐ.ಪಿ ಮತ್ತು ಪಿಂಕ್ ಕಲರ್ ಪಾಸ್ ಹೊಂದಿರುವವರಿಗೆ ಪ್ರವೇಶವಿರುತ್ತದೆ.
ಗೇಟ್ ನಂ-5 ರಲ್ಲಿ ಹಸಿರು ಬಣ್ಣದ ಸಾರ್ವಜನಿಕ ಪಾಸ್ ಹೊಂದಿರುವವರಿಗೆ ಪ್ರವೇಶವಿರುತ್ತದೆ, ಕಾರ್ಯಕ್ರಮದ ಭದ್ರತಾ ದೃಷ್ಟಿಯಿಂದ ಗೇಟ್ಗಳ ಬಳಿ ತಪಾಸಣೆಗೆ ಒಳಪಟ್ಟು ಪೊಲೀಸರೊಂದಿಗೆ ಸಹಕರಿಸುವಂತೆ ಆಯುಕ್ತರು ತಿಳಿಸಿದರು.

ಮನವಿ
ಸಮಾರಂಭಕ್ಕೆ ಆಗಮಿಸುವವರು ಬೆಳಿಗ್ಗೆ 8.30 ರ ಒಳಗಾಗಿ ತಮ್ಮ ಆಸನಗಳಲ್ಲಿ ಆಸೀನರಾಗತಕ್ಕದ್ದು. ಯಾವುದೇ ಕಾರಣಕ್ಕೂ ಮೈದಾನದದೊಳಗೆ ಪ್ರವೇಶಿಸತಕ್ಕದ್ದಲ್ಲ. ಸಮಾರಂಭಕ್ಕೆ ಆಗಮಿಸುವ ಸಾರ್ವಜನಿಕರು ಮಣಿಪಾಲ್ ಸೆಂಟರ್ ಕಡೆಯಿಂದ ಕಬ್ಬನ್ ರಸ್ತೆ ಮೂಲಕ ಗೇಟ್ ನಂ-5ಕ್ಕೆ ಆಗಮಿಸಲು ಸೂಚಿಸಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ತಮ್ಮೊಂದಿಗೆ ಅನಗತ್ಯವಾದ ಲಗೇಜು ಹಾಗೂ ಇತರೆ ವಸುಗಳನ್ನು ತರುವಂತಿಲ್ಲ. ಯಾವುದಾದರೂ ಅನುಮಾನಾಸ್ಪದ ವಸ್ತುಗಳು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲ ಕೂಡಲೇ ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಹಾಗೂ ಭದ್ರತೆಯ ಅಂಗವಾಗಿ ಮೈದಾನಕ್ಕೆ ಆಗಮಿಸುವವರು ಗೇಟ್ಗಳ ಬಳಿ ತಪಾಸಣೆಗೆ ಪೊಲೀಸರೊಂದಿಗೆ ಸಹಕರಿಸುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

ಸಿಗರೇಟ್, ಬೆಂಕಿ ಪೆಟ್ಟಿಗೆ, ಕರಪತ್ರಗಳು, ಬಣ್ಣದ ದ್ರಾವಣಗಳು, ನೀರಿನ ಬಾಟಲ್ಗಳು ಹಾಗೂ ಕ್ಯಾನ್ಗಳು, ಹರಿತವಾದ ವಸ್ತು ಹಾಗೂ ಚಾಕು, ಚೂರಿಗಳು, ಕಪ್ಪು ಕರವಸ್ತ್ರಗಳು, ತಿಂಡಿ, ತಿನಿಸುಗಳು, ಪಟಾಕಿ ಮತ್ತು ಸೋಟಕ ವಸ್ತುಗಳು ಹಾಗೂ ಶಸ್ತ್ರಾಸ್ತ್ರಗಳು ಮೈದಾನದೊಳಗೆ ನಿಷೇಸಲಾಗಿದೆ ಎಂದು ಆಯುಕ್ತರು ಹೇಳಿದರು.

ಭದ್ರತಾ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಬರುವ ಎಲ್ಲಾ ಆಹ್ವಾನಿತರು ಮೊಬೈಲ್ ಫೋನ್, ಹೆಲ್ಮೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ಕೋರಲಾಗಿದೆ. ನಿರ್ಬಂತ ವಸ್ತುಗಳು ತಂದಲ್ಲಿ ಒಳಗೆ ಪ್ರವೇಶವಿಲ್ಲ. ಬೆಳಗ್ಗೆ 8.00 ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ.

RELATED ARTICLES

Latest News