ಬೆಂಗಳೂರು,ಜ.21- ಗಣರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ನಗರ ಪೊಲೀಸರು ಸನ್ನದ್ಧರಾಗಿದ್ದಾರೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ಉಗ್ರ ದಾಳಿ ಸಾಧ್ಯತೆ ಇರುವುದರಿಂದ ಇಡೀ ನಗರದ ಮೇಲೆ ಪೊಲೀಸರು ಹದ್ದಿನಕಣ್ಣಿಟ್ಟಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಟ್ಟೆಚ್ಚರ ವಹಿಸಿದ್ದಾರೆ.
ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರ ನಿರ್ದೇಶನದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ನೇತೃತ್ವದ ವಿಶೇಷ ಪೊಲೀಸ್ ತಂಡಗಳು ಇಂದು ಬೆಳಿಗ್ಗೆ ಇಡೀ ನಗರವನ್ನು ಜಾಲಾಡಿವೆ.
ಡಾ.ಶರಣಪ್ಪ ನೇತೃತ್ವದಲ್ಲಿ 6 ಡಿಸಿಪಿಗಳು, 10 ಎಸಿಪಿಗಳು, 25 ಪೊಲೀಸ್ ಇನ್ಸ್ಪೆಕ್ಟರ್ಗಳು ಹಾಗೂ 220 ಪೊಲೀಸರು
ಮತ್ತು ಶ್ವಾನದಳ, ಬಾಂಬ್ ಪತ್ತೆ ದಳಗಳು ಮೆಜೆಸ್ಟಿಕ್ ಬಸ್ ನಿಲ್ದಾಣ, ಸಿಟಿ ರೈಲ್ವೆ ನಿಲ್ದಾಣ, ಯಶವಂತಪುರ ರೈಲ್ವೆ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣ, ಜಯನಗರ ಬಸ್ ಟರ್ಮಿನಲ್, ಪ್ರಮುಖ ಮೆಟ್ರೋ ನಿಲ್ದಾಣಗಳು ಹಾಗೂ ನಗರದಲ್ಲಿರುವ ವಿವಿಧ ಹೋಟೆಲ್ ಮತ್ತು ಲಾಡ್ಜ್ಗಳ ಮೇಲೆ ಕ್ಷಿಪ್ರ ಕಾರ್ಯಚರಣೆ ನಡೆಸಿವೆ.
ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆಗೆ ಹರಿದು ಬಂದ ಭಕ್ತ ಸಾಗರ
ಹೋಟೆಲ್ಗಳು ಹಾಗೂ ಲಾಡ್ಜ್ಗಳಲ್ಲಿ ತಂಗಿರುವ ಅನುಮಾನಾಸ್ಪದ ವ್ಯಕ್ತಿಗಳ ಮಾಹಿತಿ ಕಲೆ ಹಾಕಲಾಗಿದೆ. ಗಣ ರಾಜ್ಯೋತ್ಸವದವರೆಗೂ ಪ್ರತಿನಿತ್ಯ ಇದೇ ರೀತಿಯ ಕ್ಷಿಪ್ರ ಕಾರ್ಯಾಚರಣೆ ನಡೆಸಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ಈ ಸಂಜೆಗೆ ತಿಳಿಸಿದ್ದಾರೆ.
ನಗರಕ್ಕೆ ಬರುವ ಎಲ್ಲಾ ರಸ್ತೆಗಳಲ್ಲಿ ರಾತ್ರಿ ವೇಳೆ ಹೆಚ್ಚು ಪೊಲೀಸರನ್ನು ನಿಯೋಜಿಸುವುದರ ಜೊತೆಗೆ ಪ್ರತಿಯೊಂದು ವಾಹನಗಳ ಮೇಲೆ ನಿಗಾ ಇಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕುಸ್ತಿ ಫೆಡರೇಷನ್ಗೆ ಉಸ್ತುವಾರಿ ಸಮಿತಿ ರಚನೆ : 3 ದಿನಗಳ ಧರಣಿ ಅಂತ್ಯ
ಸಾರ್ವಜನಿಕರು ಯಾವುದೇ ವಾರಸುದಾರರಿಲ್ಲದ ಅಥವಾ ಅನುಮಾನಾಸ್ಪದ ವಸ್ತುಗಳು ಹಾಗೂ ಶಂಕಿತ ವ್ಯಕ್ತಿಗಳ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ದೂರವಾಣಿ ಸಂಖ್ಯೆ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
Republic Day, Preparations, security,