ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ

Social Share

ಬೆಂಗಳೂರು, ಜ.23- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಾಗದ ಮಾಲೀಕತ್ವದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈ ಬಾರಿ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆಗೆ ಬೆಂಗಳೂರು ನಗರ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಉತ್ತರ ವಿಭಾಗದ ಎಸಿ ಧ್ವಜರೋಹಣ ಮಾಡಲಿದ್ದಾರೆ.

ಆಚರಣೆ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಅವರು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಕಂದಾಯ ಇಲಾಖೆ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲು ಅವಕಾಶ ಕಲ್ಪಿಸಲಾಗಿದೆ.

ಇನ್ನೂ, ಈ ಸಂಬಂಧ ಪೊಲೀಸ್ ಸೇರಿದಂತೆ ಇನ್ನಿತರೆ ಸ್ಥಳೀಯ ಸಂಸ್ಥೆಗಳೊಂದಿಗೆ ಜಿಲ್ಲಾಡಳಿತ ಸಭೆ ನಡೆಸಿದ್ದು, ಅಂದು ಧ್ವಜರೋಹಣ ಜೊತೆಗೆ, ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಇನ್ನೂ, ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವಂತೆ ಸೂಚಿಸಲಾಗಿದೆ.ಅದರಂತೆ ಈದ್ಗಾ ವ್ಯಾಪ್ತಿಯಲ್ಲಿ ಪೊಲೀಸರ ಸಂಖ್ಯೆ ಹೆಚ್ಚಿಸಲಾಗಿದೆ.

ಗರ್ಭ ಮುಂದುವರೆಸುವ, ತೆಗೆಸುವ ಅಧಿಕಾರ ಮಹಿಳೆಗೆ ಮಾತ್ರ ಸೇರಿದೆ : ಬಾಂಬೆ ಹೈಕೋರ್ಟ್

ಜನಪ್ರತಿಧಿನಿಗಳಿಗೆ ಸಹ ಸರ್ಕಾರದಿಂದಲೇ ಆಹ್ವಾನ ನೀಡಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಈದ್ಗಾ ಮೈದಾನದಲ್ಲಿ ಕೆಲವು ನಿರ್ಬಂಧ ಹೇರಲಾಗಿತ್ತು. ಈ ಬಾರಿ ಯಾವುದೇ ನಿರ್ಬಂಧವಿಲ್ಲದೇ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ.

ಇನ್ನೂ ಈ ಕುರಿತು ಪ್ರತಿಕ್ರಿಯಿಸಿದ ಚಾಮರಾಜಪೇಟೆ ನಾಗರಿಕ ಒಕ್ಕೂಟದ ಸದಸ್ಯರೊಬ್ಬರು, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಲಾಗಿದೆ ಎಂದಿದ್ದಾರೆ. ಸರ್ಕಾರದ ಈ ತೀರ್ಮಾನ ಉತ್ತಮವಾದ ಬೆಳವಣಿಗೆಯಾಗಿದೆ. ಸ್ವಾತಂತ್ರ್ಯ ದಿನಾಚರಣೆಗಿಂತಲೂ ಅದ್ದೂರಿಯಾಗಿ ಆಚರಣೆ ಆಗಬೇಕು. ಅದ್ದೂರಿಯಾಗಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಸಬೇಕು. ಕಾಟಚಾರ ಗಣರಾಜ್ಯೋತ್ಸವ ಆಗಬಾರದು ಎಂದರು.

ವಿಧಾನಸೌಧದ ಮುಂಭಾಗ ನೇತಾಜಿ ಪ್ರತಿಮೆ ಮರುಸ್ಥಾಪನೆ : ಸಿಎಂ ಬೊಮ್ಮಾಯಿ

ಗಣರಾಜ್ಯೋತ್ಸವದ ಜೊತೆಗೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಬೇಕು. ನಮ್ಮ ಸಲಹೆಗಳನ್ನು ನೀಡಲು ಇಂದು ಜಿಲ್ಲಾಕಾರಿಯನ್ನು ಭೇಟಿ ಮಾಡುತ್ತೇವೆ ಎಂದು ಹೇಳಿದರು.

Republic Day, celebrated, Chamarajpet, Idgah, Maidan,

Articles You Might Like

Share This Article