ಗಣರಾಜ್ಯೋತ್ಸದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ತಿರಸ್ಕಾರ, ಕರ್ನಾಟಕಕ್ಕೆ ಡಬಲ್ ಎಂಜಿನ್ ಧೋಕಾ

Social Share

ಬೆಂಗಳೂರು, ಜ.7- ನವದೆಹಲಿಯ ಕರ್ತವ್ಯ ಪಥದಲ್ಲಿ ಜ.26ರ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳುವುದಿಲ್ಲ. 13 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ರಾಜ್ಯದ ಸ್ತಬ್ಧ ಚಿತ್ರವನ್ನು ತಿರಸ್ಕರಿಸುವುದರಿಂದ ಅವಕಾಶ ಕೈತಪ್ಪಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ ಅಧಿಕಾರದಲ್ಲಿದ್ದು, ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಇದು ಇನ್ನಷ್ಟು ಪುಷ್ಠಿ ನೀಡುವಂತಾಗಿದೆ.

ಜ. 26ರ ಗಣರಾಜ್ಯೋತ್ಸವದಂದು ದೆಹಲಿಯ ಕರ್ತವ್ಯ ಪಥದಲ್ಲಿ ದೇಶದ ವೈವಿಧ್ಯಮಯಗಳನ್ನು ಪ್ರದರ್ಶಿಸುವ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳುತ್ತಿತ್ತು. ನಾಡು, ನುಡಿ, ಇತಿಹಾಸ, ಸಂಸ್ಕøತಿ, ಆಚಾರ, ವಿಚಾರಗಳು ಸೇರಿದಂತೆ ಹಲವಾರು ಸ್ತಬ್ಧ ಚಿತ್ರಗಳನ್ನು ಪ್ರದರ್ಶಿಸಿ ವಿವಿಧತೆಯಲ್ಲಿ ಭಾರತ ಏಕತೆ ಎಂಬುದನ್ನು ಇದು ಸಾರುತ್ತಿತ್ತು.

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಕುಡುಕ ಅರೆಸ್ಟ್

ಆದರೆ 13 ವರ್ಷಗಳ ನಂತರ ಗಣರಾಜ್ಯೋತ್ಸವ ಫೆರೆಡ್‍ನಲ್ಲಿ ಸಂಸ್ಕøತಿ ಮತ್ತು ಪರಂಪರೆಯನ್ನು ಬಿಂಬಿಸುವ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೇಂದ್ರ ಸರ್ಕಾರ ನಿರಾಕರಿಸಿರುವುದು ಕನ್ನಡಿಗರ ಆಕ್ರೋಶದ ಕಟ್ಟೆ ಹೊಡೆಯುವಂತೆ ಮಾಡಿದೆ.

ರಾಜ್ಯದಿಂದ ಈ ಬಾರಿ ಒಟ್ಟು ನಾಲ್ಕು ಸ್ತಬ್ಧ ಚಿತ್ರಗಳನ್ನು ಆಯ್ಕೆ ಮಾಡಲಾಗಿತ್ತು. ಸಿರಿಧಾನ್ಯ, ನಾರಿಶಕ್ತಿ, ಸಾಲು ಮರದ ತಿಮ್ಮಕ್ಕ ಸೇರಿದಂತೆ ಒಟ್ಟು ನಾಲ್ಕು ಸ್ತಬ್ಧ ಚಿತ್ರಗಳನ್ನು ಅಂತಿಮಗೊಳಿಸಿ ಆಯ್ಕೆ ಸಮಿತಿಗೆ ಕಳುಹಿಸಲಾಗಿತ್ತು. ಪ್ರತಿ ವರ್ಷ ಕೇಂದ್ರ ಸರ್ಕಾರ ಕೇಂದ್ರದ ರಕ್ಷಣಾ ಇಲಾಖೆ ಮತ್ತು ಪ್ರಸಾರ ಖಾತೆ ಇಲಾಖೆಯು ಜ. 26ರ ಗಣರಾಜ್ಯೋತ್ಸವಕ್ಕೆ ಸ್ತಬ್ಧ ಚಿತ್ರಗಳನ್ನು ಅಂತಿಮಗೊಳಿಸಿ ಕಳುಹಿಸಿಕೊಡಬೇಕೆಂದು ಆಯಾ ರಾಜ್ಯಗಳಿಗೆ ಸೂಚನೆ ನೀಡುತ್ತದೆ.

ಅದರಂತೆ ಕರ್ನಾಟಕದಿಂದ ಈ ಬಾರಿ ನಾಲ್ಕು ಸ್ತಬ್ಧ ಚಿತ್ರಗಳನ್ನು ಅಂತಿಮಗೊಳಿಸಿ ಸಮಿತಿಗೆ ಕಳುಹಿಸಿತ್ತು. ಸ್ತಬ್ಧ ಚಿತ್ರದಲ್ಲಿ ಈ ಬಾರಿ ಸಿರಿಧಾನ್ಯವನ್ನು ಪ್ರದರ್ಶನ ಮಾಡಲು ಆಲೋಚಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಸಿರಿಧಾನ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಸಿರಿಧಾನ್ಯದಲ್ಲಿ ಸಾಧಿಸಿರುವ ಪ್ರಗತಿ ಚಿತ್ರವನ್ನು ಬಿಂಬಿಸುವುದು ಇದರ ಉದ್ದೇಶವಾಗಿತ್ತು.

ಯಾವುದೇ ಒಂದು ಸ್ತಬ್ಧ ಚಿತ್ರವನ್ನು ಆಯ್ಕೆ ಮಾಡಬೇಕಾದರೆ ಆಯ್ಕೆ ಸಮಿತಿಯ ಮುಂದೆ ಆಯಾ ರಾಜ್ಯಗಳ ಅಧಿಕಾರಿಗಳು ಅದರ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಬಳಿಕವಷ್ಟೇ ಯಾವುದಾದರೂ ಒಂದು ಸ್ತಬ್ಧ ಚಿತ್ರವನ್ನು ಅಂತಿಮಗೊಳಿಸಿ ಜ. 26ರ ಗಣರಾಜ್ಯೋತ್ಸವಕ್ಕೆ ಪ್ರದರ್ಶಿಸಲು ಅನುಮತಿ ನೀಡುತ್ತಾರೆ.

ಆದರೆ ಈ ಬಾರಿ ಸಿರಿಧಾನ್ಯದ ಬಗ್ಗೆ ಅಧಿಕಾರಿಗಳು ಆಯ್ಕೆ ಸಮಿತಿ ಮುಂದೆ ಸಮರ್ಪಕವಾದ ಮಾಹಿತಿ ನೀಡಲು ವಿಫಲರಾಗಿದ್ದಾರೆ ಎಂದು ತಿಳಿದುಬಂದಿದೆ. ಸಿರಿಧಾನ್ಯದ ಬದಲಿಗೆ ರಾಗಿ ಮತ್ತಿತ್ತರ ಬೆಳೆಗಳ ಬಗ್ಗೆ ವಿವರಣೆ ನೀಡಿದ್ದರಿಂದ ನಾಲ್ಕು ಸ್ತಬ್ಧ ಚಿತ್ರಗಳನ್ನು ತಿರಸ್ಕರಿಸಲಾಗಿದೆ.

ಅಗ್ರ ಪ್ರಶಾಸ್ತ್ಯ:
ಸಾಮಾನ್ಯವಾಗಿ ಗಣರಾಜ್ಯೋತ್ಸವದ ಸ್ತಬ್ಧ ಚಿತ್ರದಲ್ಲಿ ಕರ್ನಾಟಕಕ್ಕೆ ಯಾವಾಗಲೂ ಅಗ್ರ ಪ್ರಾಶಸ್ತ್ಯವನ್ನು ನೀಡಲಾಗುತ್ತಿತ್ತು. ಹಂಪಿ, ಐಹೊಳೆ, ಬಾದಾಮಿ, ಪಟ್ಟದಕಲ್ಲು, ಮೈಸೂರು ಅರಮನೆ, ಜಗದ್‍ಜ್ಯೋತಿ ಬಸವೇಶ್ವರರು, ಅಕ್ಕಮಹಾದೇವಿ ಸೇರಿದಂತೆ ಕರ್ನಾಟಕದ ನೆಲ, ಜಲ, ಭಾಷೆ, ಇತಿಹಾಸ, ಸಂಸ್ಕøತಿ, ಕಲಕುಶಲ, ಜೀವ ವೈವಿಧ್ಯ, ಜನಪದ ಹೀಗೆ ಹತ್ತಾರು ಸ್ತಬ್ಧ ಚಿತ್ರಗಳನ್ನು ಪ್ರದರ್ಶಿಸಿ ಪ್ರದರ್ಶನ ಮಾಡಲಾಗಿತ್ತು.

ಕೆಲವು ಸಂದರ್ಭಗಳಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಮೊದಲ ಬಹುಮಾನ ಸಿಕ್ಕಿದ್ದರೆ ಕಳೆದ ವರ್ಷ ಅಂದರೆ 2020ರ 2022ರಲ್ಲಿ ಗಣರಾಜ್ಯೋತ್ಸವದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ 2ನೇ ಬಹುಮಾನ ಸಿಕ್ಕಿತ್ತು.

ಶಿಕ್ಷಕಿ ಮೇಲೆ ಗುಂಡು ಹರಿಸಿದ 6 ವರ್ಷದ ವಿದ್ಯಾರ್ಥಿ

ಆಯ್ಕೆ ಸಮಿತಿ ಮಾಡಿರುವ ಇನ್ನೊಂದು ಎಡವಟ್ಟು ಎಂದರೆ ಈ ಬಾರಿ ಉತ್ತರ ವಲಯ, ದಕ್ಷಿಣ ವಲಯ, ಕೇಂದ್ರ ವಲಯ ಮತ್ತು ಮಧ್ಯ ವಲಯ ಎಂದು ನಾಲ್ಕು ವಿಭಾಗಗಳನ್ನು ಸೃಷ್ಟಿಸಿತು. ಕರ್ನಾಟಕ ದಕ್ಷಿಣ ವಲಯದಲ್ಲಿ ಬಂದಿದ್ದರಿಂದ ತಮಿಳು ನಾಡು ಮತ್ತು ಕೇರಳವನ್ನು ಆಯ್ಕೆ ಮಾಡಿ ನಮ್ಮ ರಾಜ್ಯದ ಸ್ತಬ್ಧ ಚಿತ್ರವನ್ನು ತಿರಸ್ಕರಿಸಲಾಗಿದೆ.

ಕಳೆದ ಬಾರಿ ಗಣರಾಜ್ಯೋತ್ಸವದ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಸಮಾಜ ಸುಧಾರಕ ನಾರಾಯಣ ಗುರು ಅವರ ಸ್ತಬ್ಧ ಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಿಂದ ಭಾರಿ ವಿವಾದವೇ ಸೃಷ್ಟಿಯಾಗಿತ್ತು. ಅಲ್ಲದೆ, ತಮಿಳು ನಾಡು ಮತ್ತು ಪಶ್ಚಿಮ ಬಂಗಾಳದ ಸ್ತಬ್ಧ ಚಿತ್ರಗಳಿಗೂ ಕೋಕ್ ಕೊಟ್ಟಿದ್ದರಿಂದ ಅಲ್ಲಿನ ಮುಖ್ಯಮಂತ್ರಿಗಳು ಇದನ್ನು ಪ್ರಬಲವಾಗಿ ವಿರೋಧಿಸಿದರು.

ಈ ಬಾರಿ ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಒಟ್ಟು 31 ರಾಜ್ಯಗಳ ಪೈಕಿ ಕೇವಲ 13 ರಾಜ್ಯಗಳ ಸ್ತಬ್ಧ ಚಿತ್ರಗಳ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದ್ದು, ಕರ್ನಾಟಕವನ್ನು ಕಡೆಗಣಿಸಿರುವುದು ಕನ್ನಡಿಗರಿಗೆ ಮಾಡಿರುವ ವಂಚನೆ ಎಂಬ ಮಾತುಗಳು ಕೇಳಿಬರುತ್ತಿವೆ.

ತಮಿಳು ನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರಾದೇಶಿಕ ಪಕ್ಷಗಳು ಆಡಳಿತದಲ್ಲಿವೆ. ಅಲ್ಲಿನ ಮುಖ್ಯಮಂತ್ರಿಗಳು ಗುಟುರು ಹಾಕಿದರೆ ಎಲ್ಲವೂ ಸರಿಹೋಗುತ್ತದೆ. ಆದರೆ ಕನ್ನಡಿಗರ ಸ್ತಬ್ಧಚಿತ್ರ ತಿರಸ್ಕರಿಸಿದರೂ 25 ಸಂಸದರು ಬಾಯಿ ಬಿಡದಿರುವುದು ದುರಂತ ಎಂಬ ಆಕ್ರೋಶದ ಮಾತುಗಳು ಕೇಳಿಬರುತ್ತಿವೆ.

CentralGovernment, #Karnataka, #Tableau, #RepublicDay,

Articles You Might Like

Share This Article