ಕನ್ನಡ ಚಿತ್ರರಂಗದ ಮೇರು ನಟ ಲೋಹಿತಾಶ್ವ ವಿಧಿವಶ

Social Share

ಬೆಂಗಳೂರು : ಕನ್ನಡ ಚಿತ್ರರಂಗದ ಮೇರು ನಟ ಲೋಹಿತಾಶ್ವ ಅವರು ಇಂದು ಸಂಜೆ ನಿಧನರಾಗಿದ್ದಾರೆ. ಜಯನಗರ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತುರ್ತು ಚಿಕಿತ್ಸಾಹ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಪರಿಸ್ಥಿತಿ ಗಂಭೀರವಾಗಿದ್ದರೂ ಸಹ ವೈದ್ಯರು ಅವರ ಜೀವ ಉಳಿಸಲು ಸಾಕಷ್ಟು ಪ್ರಯಾಸಪಟ್ಟಿದ್ದರು. ಕನ್ನಡ ಚಿತ್ರರಂಗದಲ್ಲಿ ಸುಮಾರು 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು ಮನಮುಟ್ಟುವ ಜೀವನ ಸಾರದ ಅಭಿನಯಕ್ಕೆ ಎಲ್ಲರ ಮೆಚ್ಚುಗೆ ಪಡೆಯುತ್ತಿದ್ದರು.

ಲೋಹಿತಾಶ್ವ ಅವರಿಗೆ ಮೂವರು ಮಕ್ಕಳು, ಅವರಲ್ಲಿ ಕನ್ನಡ ಚಿತ್ರರಂಗದಲ್ಲಿ ಉತ್ತಮ ಖಳನಟನಾಗಿ ಗುರುತಿಸಿಕೊಂಡಿರುವ ಶರತ್ ಲೋಹಿತಾಶ್ವ ಕೂಡ ಒಬ್ಬರು. ವತ್ಸಲಾ ಅವರ ಪತ್ನಿಯ ಹೆಸರು. ಅಭಿಮನ್ಯು, AK 47, ಅವತಾರ ಪುರುಷ, ಚಿನ್ನ, ಹೊಸ ನೀರು, ಗಜೇಂದ್ರ, ವಿಶ್ವ, ಪ್ರತಾಪ್, ಪೊಲೀಸ್ ಲಾಕಪ್, ರೆಡಿಮೇಡ್ ಗಂಡ, ಸ್ನೇಹಲೋಕ, ಸುಂದರಕಾಂಡ, ಸಿಂಹದ ಮರಿ, ಮೂರು ಜನ್ಮ, ಸಾಂಗ್ಲಿಯಾನ, ಟೈಮ್ ಬಾಂಬ್, ಲಾಕಪ್ ಡೆತ್, ಸಂಭವಾಮಿ ಯುಗೇ ಯುಗೇ, ರಣಚಂಡಿ, ಸಮಯದ ಗೊಂಬೆ, ಸಂಗ್ರಾಮ, ನ್ಯೂ ಡೆಲ್ಲಿ, ಸಾರಥಿ ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಹಿರಿಯ ನಿರ್ದೇಶಕ ಬಿ ಸೋಮಶೇಖರ್ ಅವರ ಬಹುತೇಕ ಸಿನಿಮಾಗಳಲ್ಲಿ ಲೋಹಿತಾಶ್ವ ನಟಿಸಿದ್ದಾರೆ. ಪರಶುರಾಮ, ಸಮಯದ ಗೊಂಬೆ ಸಿನಿಮಾಗಳಲ್ಲಿ ಅಣ್ಣಾವ್ರ ಜೊತೆ ನಟಿಸಿದ್ದರು. ಅಂಬರೀಶ್, ವಿಷ್ಣುವರ್ಧನ್, ಶಂಕರ್ ನಾಗ್ ಜೊತೆ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ಜೀವ ಇಂದು ವಿಧಿವಶರಾಗಿದ್ದಾರೆ.

Articles You Might Like

Share This Article