Thursday, September 19, 2024
Homeರಾಜ್ಯಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಆತಹತ್ಯೆ

ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಆತಹತ್ಯೆ

ಬೆಂಗಳೂರು,ಆ.10- ನಿವೃತ್ತ ಸಹಾಯಕ ಕೃಷಿ ಅಧಿಕಾರಿಯೊಬ್ಬರು ಆತಹತ್ಯೆಗೆ ಶರಣಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಜಿಬಿ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಬ್ದುಲ್‌ ರಷೀದ್‌(64) ಮೃತಪಟ್ಟ ನಿವೃತ್ತ ಅಧಿಕಾರಿ.

ಅಬ್ದುಲ್‌ ರಷೀದ್‌ ಅವರು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಅವರ ಮೇಲೆ ಪ್ರಕರಣವೊಂದು ದಾಖಲಾಗಿದ್ದು, ತನಿಖಾ ಹಂತದಲ್ಲಿದೆ. ಹಾಗಾಗಿ ಅವರಿಗೆ ಇನ್ನು ನಿವೃತ್ತಿ ವೇತನ ಸಿಕ್ಕಿರಲಿಲ್ಲ.

ಆ ಹಣವನ್ನೇ ನಂಬಿಕೊಂಡಿದ್ದ ಅಬ್ದುಲ್‌ ಅವರು ಇದರಿಂದ ಮನನೊಂದಿದ್ದರು. ನಿನ್ನೆ ಪತ್ನಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಇಬ್ಬರು ಮಕ್ಕಳೂ ಇರಲಿಲ್ಲ. ಆ ಸಂದರ್ಭದಲ್ಲಿ ಡೆತ್‌ನೋಟ್‌ ಬರೆದಿಟ್ಟು, ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು ಅಬ್ದುಲ್‌ ರಷೀದ್‌ ಅವರು ಆತಹತ್ಯೆ ಮಾಡಿಕೊಂಡಿದ್ದಾರೆ.

ಮನೆ ಮಾಲೀಕರು ನೋಡಿ ತಕ್ಷಣ ಅವರ ಪತ್ನಿಗೆ ತಿಳಿಸಿದ್ದಾರೆ. ನಂತರ ಪೊಲೀಸರಿಗೆ ವಿಷಯ ತಿಳಿದು ರಾತ್ರಿ 11 ಗಂಟೆ ಸುಮಾರಿನಲ್ಲಿ ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಡೆತ್‌ನೋಟ್‌ ಪತ್ತೆಯಾಗಿದೆ.

ನಾನು ಸೇವೆಯಿಂದ ನಿವೃತ್ತನಾಗಿ ನಾಲ್ಕು ವರ್ಷವಾದರೂ ನಿವೃತ್ತಿ ವೇತನ ಬಂದಿಲ್ಲ. ಹಾಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಡೆತ್‌ನೋಟ್‌ ವಶಕ್ಕೆ ಪಡೆದಿರುವ ಪೊಲೀಸರು ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News