ಬೆಂಗಳೂರು : ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷೀನಾರಾಯಣ ಅವರು, ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರದಿಂದ ಕಣಕ್ಕೀಳಿಯಲು ಸಜ್ಜಾಗಿದ್ದಾರೆ.
ಪಕ್ಷದ ವರಿಷ್ಟರ ಸೂಚನೆಯಂತೆ ಈಗಾಗಲೇ ಕ್ಷೇತ್ರದಲ್ಲಿ ಕಾರ್ಯಕರ್ತರ ಜೊತೆ ಸಂಘಟನೆ ಆರಂಭಿಸಿರುವ ಅವರು, ಮತದಾರರ ಮನವೊಲಿಕೆಗೆ ನಾನಾ ಕಸರತ್ತು ನಡೆಸುತ್ತಿದ್ದಾರೆ.2008 ರಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ನೇಮಿರಾಜ್ ನಾಯಕ್ ಒಂದು ಬಾರಿ ಗೆಲುವು ಸಾಧಿಸಿದ್ದರು.
2013 ಹಾಗೂ 2018 ರಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮನಾಯಕ್ ಎರಡು ಬಾರಿ ಗೆದ್ದು, ಇದೀಗ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.ಕಳೆದುಕೊಂಡಿರುವ ಕ್ಷೇತ್ರವನ್ನು ಶತಾಯಗತಾಯ ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಬಿಜೆಪಿಗೆ ಇರುವುದರಿಂದಲೇ ಕಾಂಗ್ರೆಸ್ ಎದುರು ಪ್ರಬಲ ಅಭ್ಯರ್ಥಿಯನ್ನು
ಕಣಕ್ಕೀಳಿಸಲು ಮುಂದಾಗಿದೆ.
ಹೀಗಾಗಿಯೇ ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ಎಂ.ಲಕ್ಷೀನಾರಾಯಣ ಅವರನ್ನೇ ಹುರಿಯಾಳಾಗಿಸಲು ಕಮಲಪಡೆ ಸಜ್ಜಾಗಿದೆ.ಈ ಹಿಂದೆ ಲಕ್ಷೀನಾರಾಯಣ ಅವರು ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒಲವು ತೋರಿದ್ದರು.ಆದರೆ, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಆ ಕ್ಷೇತ್ರದಿಂದ ಮಾಜಿ ಸಚಿವ ಎ ನಾರಾಯಣಸ್ವಾಮಿ ಅವರು ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಬಳಿಕ ಸಚಿವರಾಗಿದ್ದು ಇತಿಹಾಸ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತೀರಾ ಹತ್ತೀರಾಗಿರುವ ಲಕ್ಷೀನಾರಾಯಣ ಅವರು ಬಿಜೆಪಿ ವರಿಷ್ಟರ ಜೊತೆಯೂ ಉತ್ತಮ ಒಡನಾಟ ಹೊಂದಿದ್ದಾರೆ.ಕೋಲಾರ ಜಿಲ್ಲೆಯವರಾದ ಲಕ್ಷ್ಮೀನಾರಾಯಣ ಅವರು ರಾಜ್ಯ ಬಿಜೆಪಿ ನಾಯಕರಿಗೆ ಸದಾ ಹತ್ತಿರವಾಗಿದ್ದು, ಜಗದೀಶ್ ಶೆಟ್ಟರ್ ಅವರ ಪ್ರಧಾನ ಕಾರ್ಯದರ್ಶಿ ಮತ್ತು ಯಡಿಯೂರಪ್ಪ ಅವರಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ನಿವೃತ್ತ ಐಎಎಸ್ ಅಧಿಕಾರಿ ಎಂ ಲಕ್ಷ್ಮೀನಾರಾಯಣ ಅವರು ಈಗಾಗಲೇ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದಾರೆ. ಸಮಾಜ ಕಲ್ಯಾಣ, ಲೋಕೋಪಯೋಗಿ ಸೇರಿದಂತೆ ಹಲವು ಪ್ರಮುಖ ಇಲಾಖೆಗಳ ಜತೆಗೆ ಬಿಬಿಎಂಪಿ ಆಯುಕ್ತರಾಗಿಯೂ ಕೆಲಸ ಮಾಡಿದ್ದಾರೆ. . ಹಾಗಾಗಿ ಎಂ ಲಕ್ಷ್ಮೀನಾರಾಯಣ ಅವರನ್ನು ಮತ್ತೆ ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು.
#RetiredIASofficer, #MLakshminarayan, #contest, #election, #Hagaribommanahalli,