Sunday, April 28, 2024
Homeರಾಷ್ಟ್ರೀಯಗುಂಡಿಕ್ಕಿ ನಿವೃತ್ತ ಪೊಲೀಸ್ ಅಧಿಕಾರಿ ಹತ್ಯೆ ಮಾಡಿದ ಉಗ್ರರು

ಗುಂಡಿಕ್ಕಿ ನಿವೃತ್ತ ಪೊಲೀಸ್ ಅಧಿಕಾರಿ ಹತ್ಯೆ ಮಾಡಿದ ಉಗ್ರರು

ಶ್ರೀನಗರ, ಡಿ.24 – ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂದು ಮುಂಜಾನೆ ಗಂಟ್ಮುಲ್ಲಾ, ಶೀರಿ ಬಾರಾಮುಲ್ಲಾದ ಮಸೀದಿಯೊಳಗೆ ಮೊಹಮ್ಮದ್ ಶಾಫಿ ಪ್ರಾರ್ಥನೆ ಮಾಡುವಾಗ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತಿಯಾದ ತುಷ್ಟೀಕರಣಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಚ್ಚರ : ಜೋಶಿ

ಅವರನ್ನು ಆಸ್ಪತ್ರೆಗೆ ಸೇರಿಸಲು ಹೋಗುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಭದ್ರತಾ ಪಡೆ ಸ್ಥಳವನ್ನು ಸುತ್ತುವರಿದಿದ್ದು ,ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

Latest News